ನರ್ಮದಾ : ಮೋರ್ಬಿ ಅಪಘಾತದಲ್ಲಿ ಪ್ರಾಣ ಕಳೆದುಕೊಂಡವರ ಕುಟುಂಬಗಳಿಗೆ ನಾನು ಸಂತಾಪವನ್ನು ಸೂಚಿಸುತ್ತೇನೆ ಎಂದು ಪ್ರಧಾನಿ ಮೋದಿ ಹೇಳಿದರು.
ಕಾಯಕ್ರಮವೊಂದರಲ್ಲಿ ಮಾತನಾಡಿ, ಈ ದುಃಖದ ಸಮಯದಲ್ಲಿ ಸರ್ಕಾರವು ಎಲ್ಲಾ ರೀತಿಯಲ್ಲೂ ದುಃಖಿತ ಕುಟುಂಬಗಳೊಂದಿಗೆ ಇದೆ. ಗುಜರಾತ್ ಸರ್ಕಾರ ನಿನ್ನೆಯಿಂದ ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಯನ್ನು ನಡೆಸುತ್ತಿದ್ದು, ಕೇಂದ್ರವು ರಾಜ್ಯ ಸರ್ಕಾರಕ್ಕೆ ಎಲ್ಲ ಸಹಾಯವನ್ನೂ ನೀಡುತ್ತಿದೆ ಎಂದು ತಿಳಿಸಿದರು.
ನಾನು ಏಕ್ತಾ ನಗರದಲ್ಲಿದ್ದರೂ ನನ್ನ ಮನಸ್ಸು ಮೋರ್ಬಿ ಸಂತ್ರಸ್ತರ ಜೊತೆಗಿದೆ ಎಂದು ಹೇಳಿದ್ದಾರೆ. ಒಂದು ಕಡೆ ನೋವು, ಇನ್ನೊಂದು ಕಡೆ ಕರ್ತವ್ಯವಿದೆ.ಎರಡನ್ನು ನಿಭಾಯಿಸಬೇಕಿದೆ. ಕಳೆದ ರಾತ್ರಿಯೇ ಮೋರ್ಬಿಗೆ ಗುಜರಾತ್ ರಾಜ್ಯ ಮುಖ್ಯಮಂತ್ರಿಗಳು ಭೇಟಿ ನೀಡಿದ್ದು, ಶೋಧ ಕಾರ್ಯ ಹಾಗೂ ರಕ್ಷಣಾ ಕಾರ್ಯಾಚರಣೆಗಳ ಮೇಲ್ವಿಚಾರಣೆ ಮಾಡುತ್ತಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ತನಿಖೆಗಾಗಿ ಎರಡು ಸಮಿತಿಗಳ ರಚಿಸಲಾಗಿದೆ. ರಕ್ಷಣಾ ಕಾರ್ಯಾಚರಣೆ ಮತ್ತು ಪರಿಹಾರ ಕಾರ್ಯಾಚರಣೆಗಳಲ್ಲಿ ಯಾವುದೇ ಸಡಿಲಿಕೆ ಇಲ್ಲ ಎಂಬ ಭರವಸೆಯನ್ನು ಜನರಿಗೆ ಭರವಸೆ ನೀಡುತ್ತೇನೆಂದು ಹೇಳಿದರು.
ಭಾರತ ಅನನ್ಯತೆಯಿಂದ ಕೂಡಿದ್ದು, ಎಂದಿಗೂ ಅದಕ್ಕೆ ಏಕತೆಯ ಅಗತ್ಯ ಬಂದಿಲ್ಲ. ನಮ್ಮ ದೇಶದ ಈ ಐಕ್ಯತೆಯು ಇಂದು ನಮ್ಮ ಶತ್ರುಗಳ ಕಣ್ಣಿಗೆ ಬಂದಿದ್ದು, ಅದನ್ನು ಒಡೆಯಲು ಯತ್ನಿಸುತ್ತಿದ್ದಾರೆ. ಆದರೆ, ಅದರ ವಿರುದ್ಧ ನಾವು ದೃಢವಾಗಿ ನಿಲ್ಲಬೇಕಿದೆ ಎಂದು ಹೇಳಿದರು.