ಗುಜರಾತ್ : ಬಿಜೆಪಿ ತನ್ನ ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡಿದ್ದು, ಗುಜರಾತ್‌ನ ಮುಂದಿನ ಐದು ವರ್ಷದ ಅಧಿಕಾರದಲ್ಲಿ 20 ಲಕ್ಷ ಉದ್ಯೋಗ ನೀಡುವುದಾಗಿ ಭರವಸೆ ನೀಡಿದ್ದು ಅದರೊಂದಿಗೆ ಶಾಲೆಗ ಹೋಗುತ್ತಿರುವ ಬಾಲಕಿಯರಿಗೆ ಉಚಿತವಾಗಿ ಎಲೆಕ್ಟ್ರಕ್ ಸ್ಕೂಟಿ ನೀಡುವುದಾಗಿ ಮಾತು ನೀಡಿದೆ.
ಈ ವೇಳೆ ಮಾತನಾಡಿದ ನಡ್ಡಾ , ನಮ್ಮ ಸಂಕಲ್ಪ ಪತ್ರ ಕೇವಲ ಭರವಸೆಗಳ ದಾಖಲೆಯಲ್ಲ ಎಂದು ಹೇಳಿದ್ದಾರೆ. ಬಿಜೆಪಿ ಸರ್ಕಾರ ಹೇಳಿದ್ದನ್ನೇ ಮಾಡುತ್ತದೆ. ನಾವು ಸಂವಿಧಾನದ ಪ್ರಕಾರ ಹೋಗುತ್ತೇವೆ. ಹಿರಿಯ ಮಹಿಳಾ ನಾಗರಿಕರಿಗೆ ಉಚಿತ ಬಸ್ ಪ್ರಯಾಣದ ಸೌಲಭ್ಯ ಸಿಗಲಿದೆ ಎಂದಿದ್ದಾರೆ. ತನ್ನ ಸಂಕಲ್ಪ ಪತ್ರದಲ್ಲಿ ಬಿಜೆಪಿ ಒಟ್ಟು 10 ಪ್ರಮುಖ ಘೋಷಣೆ ಮಾಡಿದೆ. ಪ್ರಣಾಳಿಕೆ ಸಿದ್ಧಪಡಿಸಲು ಗುಜರಾತ್‌ನ ಒಂದು ಕೋಟಿಗೂ ಹೆಚ್ಚು ಜನರಿಂದ ಅಭಿಪ್ರಾಯ ತೆಗೆದುಕೊಳ್ಳಲಾಗಿದ್ದು, ಇದಕ್ಕಾಗಿ ವಾಟ್ಸ್‌ಆ್ಯಪ್ ಸಂಖ್ಯೆ ನೀಡಲಾಗಿದೆ ಎಂದು ಗುಜರಾತ್ ಬಿಜೆಪಿ ಅಧ್ಯಕ್ಷ ಪಾಟೀಲ್ ಹೇಳಿದ್ದಾರೆ.
ಮುಂದಿನ ಐದು ವರ್ಷಗಳಲ್ಲಿ 20 ಲಕ್ಷ ಉದ್ಯೋಗ, 2 ಲಕ್ಷದವರೆಗೆ ರೈತರಿಗೆ ಸಾಲ ಸೌಲಭ್ಯ ನೀಡಲು ಕ್ರೆಡಿಟ್ ಕಾರ್ಡ್, ನೀರಾವರಿಗೆ 25 ಸಾವಿರ ಕೋಟಿ ಅನುದಾನ, ಮುಂದಿನ ಐದು ವರ್ಷದಲ್ಲಿ ಮಹಿಳೆಯರಿಗೆ 1 ಲಕ್ಷ ಉದ್ಯೋಗ ಮೀಸಲು ನೀಡಲಾಗುವುದು ಎಂದಿದೆ.
ಸಮಿತಿಯ ಶಿಫಾರಸಿನಂತೆ ಏಕರೂಪ ನಾಗರಿಕ ಸಂಹಿತೆ ಅನುಷ್ಠಾನ,ಕೃಷಿ ಮೂಲಸೌಕರ್ಯ ನಿಧಿಯಡಿ 10 ಸಾವಿರ ಕೋಟಿ ರೂ. ಅನುದಾನ,ದೇವಭೂಮಿ ದ್ವಾರಕಾ ಕಾರಿಡಾರ್ ನಿರ್ಮಾಣ,20 ಸಾವಿರ, ಸರ್ಕಾರಿ ಶಾಲೆಗಳ ಸಂಪೂರ್ಣ ಅಭಿವೃದ್ಧಿ,ಬಾಲಕಿಯರಿಗೆ ಉಚಿತ ಎಲೆಕ್ಟ್ರಿಕ್ ಸ್ಕೂಟಿ,ಗೋಶಾಲೆಗಳಿಗೆ 500 ಕೋಟಿ ರೂಪಾಯಿ ಅನುದಾನ
ಇದರೊಂದಿಗೆ,ಗುಜರಾತ್‌ನಲ್ಲಿ ಎಐಐಎಂಎಸ್‌ನಂತಹ ಸಂಸ್ಥೆಯನ್ನು ನಿರ್ಮಿಸುವ ಭರವಸೆಯನ್ನೂ ಕೂಡ ಬಿಜೆಪಿ ನೀಡಿದೆ.