Monday, March 20, 2023
spot_img
- Advertisement -spot_img

ಗುಜರಾತ್‌ನಲ್ಲಿ ತೂಗು ಸೇತುವೆ ಕುಸಿದು 132 ಮಂದಿ ಸಾವು; ಗಣ್ಯರಿಂದ ಸಂತಾಪ

ಅಹಮದಾಬಾದ್: ಗುಜರಾತ್‌ನ ಮೊರ್ಬಿ ನಗರದಲ್ಲಿ ತೂಗು ಸೇತುವೆ ಕುಸಿದು 132 ಮಂದಿ ಸಾವನ್ನಪ್ಪಿದ್ದಾರೆ. ಘಟನೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಹಲವಾರು ನಾಯಕರು ಸಂತಾಪ ವ್ಯಕ್ತಪಡಿಸಿದ್ದಾರೆ.


ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಟ್ವೀಟ್ ಮಾಡಿ, “ಗುಜರಾತ್‌ನಿಂದ ಬಹಳ ದುಃಖದ ಸುದ್ದಿ ಬಂದಿದೆ. ಮೊರ್ಬಿಯಲ್ಲಿ ಸೇತುವೆಯೊಂದು ಕುಸಿದಿದ್ದು, ಅನೇಕ ಜನರು ನದಿಗೆ ಬಿದ್ದಿದ್ದಾರೆ ಎಂದು ವರದಿಯಾಗಿದೆ. ಪ್ರತಿಯೊಬ್ಬರ ಜೀವನ ಮತ್ತು ಯೋಗಕ್ಷೇಮಕ್ಕಾಗಿ ನಾನು ದೇವರನ್ನು ಪ್ರಾರ್ಥಿಸುತ್ತೇನೆ” ಎಂದಿದ್ದಾರೆ. ಈ ಬಾರಿಯ ಗುಜರಾತ್ ವಿಧಾನಸಭಾ ಚುನಾವಣೆಯಲ್ಲು ಆಮ್ ಆದ್ಮಿ ಪಕ್ಷವು ಬಿಜೆಪಿಯನ್ನು ಅಧಿಕಾರದಿಂದ ಕೆಳಗಿಳಿಸಲು ಸರ್ವಪ್ರಯತ್ನ ನಡೆಸುತ್ತಿದೆ ಎನ್ನಲಾಗಿದೆ. ಜೊತೆಗೆ ಹಲವು ರಾಜಕೀಯ ಪಕ್ಷಗಳ ನಾಯಕರು ಘಟನೆಯ ಬಗ್ಗೆ ಬಿಜೆಪಿಯನ್ನು ಕಟುವಾಗಿ ಟೀಕಿಸಿದ್ದಾರೆ.

ರಂದೀಪ್ ಸುರ್ಜೇವಾಲ ಇದನ್ನು “ಮಾನವ ನಿರ್ಮಿತ ದುರಂತ” ಎಂದು ಆರೋಪಿಸಿದ್ದಾರೆ. ಉಪರಾಷ್ಟ್ರಪತಿ ಜಗದೀಪ್ ಧನಕರ್ ಎಲ್ಲರನ್ನೂ ಸುರಕ್ಷಿತವಾಗಿ ರಕ್ಷಿಸಲಿ ಎಂದು ಪ್ರಾರ್ಥಿಸಿದ್ದಾರೆ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಗುಜರಾತ್ ರಾಜ್ಯದ ಎಲ್ಲಾ ಪಕ್ಷದ ಕಾರ್ಯಕರ್ತರಿಗೆ ರಕ್ಷಣಾ ಕಾರ್ಯದಲ್ಲಿ ಸಾಧ್ಯವಿರುವ ಎಲ್ಲ ನೆರವು ನೀಡುವಂತೆ ಮನವಿ ಮಾಡಿದ್ದಾರೆ.


ಬಿಜೆಪಿಯನ್ನು ಕಟುವಾಗಿ ಟೀಕಿಸಿರುವ ಕಾಂಗ್ರೆಸ್ ಹಿರಿಯ ನಾಯಕ ದಿಗ್ವಿಜಯ ಸಿಂಗ್, ಇದು ದೇವರ ಕೃತ್ಯವೇ ಅಥವಾ ವಂಚನೆಯ ಕೃತ್ಯವೇ..? ಎಂದು ಪ್ರಶ್ನಿಸಿದ್ದಾರೆ. ಮೊರ್ಬಿ ಸೇತುವೆ ಕುಸಿತದಲ್ಲಿ ಭಾರೀ ಪ್ರಮಾಣದ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿರುವ ಹಿರಿಯ ಕಾಂಗ್ರೆಸ್ ನಾಯಕ ದಿಗ್ವಿಜಯ್ ಸಿಂಗ್, ಸೇತುವೆ ಕುಸಿತದ ಘಟನೆಯು ದೇವರ ಕೃತ್ಯವೇ ಅಥವಾ ವಂಚನೆಯ ಕೃತ್ಯವೇ..? ಎಂದು ಪ್ರಧಾನಿ ಮೋದಿಯನ್ನು ಪ್ರಶ್ನಿಸಿದ್ದಾರೆ.

ಗುಜರಾತ್‌ನ ಮೊರ್ಬಿಯಲ್ಲಿ ನಡೆದ ದುರಂತ ಘಟನೆಯ ಬಗ್ಗೆ ಕೇಳಿ ದುಃಖಿತನಾಗಿದ್ದೇನೆ. ಎಲ್ಲರ ಸುರಕ್ಷಿತ ರಕ್ಷಣೆ ಮತ್ತು ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ನಾನು ಪ್ರಾರ್ಥಿಸುತ್ತೇನೆ. ಸಂತ್ರಸ್ತ ಕುಟುಂಬಗಳಿಗೆ ನನ್ನ ಸಂತಾಪಗಳು” ಎಂದು ಧನಕರ್ ರನ್ನು ಉಲ್ಲೇಖಿಸಿ ಉಪರಾಷ್ಟ್ರಪತಿಯವರ ಕಾರ್ಯದರ್ಶಿ ಟ್ವೀಟ್ ಮಾಡಿದ್ದಾರೆ.

ಘಟನೆಯಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ 2 ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ಪ್ರಧಾನಿ ಮೋದಿ ಘೋಷಿಸಿದ್ದಾರೆ ಎಂದು ಅವರ ಕಚೇರಿ ತಿಳಿಸಿದೆ. ಘಟನೆಗೆ ದುಃಖ ವ್ಯಕ್ತಪಡಿಸಿರುವ ಪ್ರಧಾನಿ ಮೋದಿ, ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಮತ್ತು ಅಧಿಕಾರಿಗಳೊಂದಿಗೆ ಮಾತನಾಡಿದ್ದೇನೆ ಎಂದು ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

Related Articles

- Advertisement -

Latest Articles