ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯಲ್ಲಿ ಬುಧವಾರ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ನಡೆದ ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರ ಹತ್ಯೆಗೈಯ್ಯಲಾಗಿದೆ. ಜೊತೆಗೆ ಭಾರತೀಯ ಸೇನೆಯ ಕರ್ನಲ್, ಮೇಜರ್ ಮತ್ತು ಪೊಲೀಸ್ ಅಧಿಕಾರಿ ಸೇರಿ ಮೂವರು ಪ್ರಾಣ ಕಳೆದುಕೊಂಡಿದ್ದಾರೆ ಎಂದು ವರದಿಯಾಗಿದೆ.
ಅನಂತನಾಗ್ ಜಿಲ್ಲೆಯ ಕೋಕರ್ನಾಗ್ ಪ್ರದೇಶದಲ್ಲಿ ಅಡಗಿರುವ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ಎನ್‌ಕೌಂಟರ್ ನಡೆದಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ.
ಇದನ್ನೂ ಓದಿ: I.N.D.I.A ಒಕ್ಕೂಟ ಸಮನ್ವಯ ಸಮಿತಿಯ ಮೊದಲ ಸಭೆ ಯಶಸ್ವಿ; ಸೀಟು ಹಂಚಿಕೆ ಚರ್ಚೆ
‘ಕಾಶ್ಮೀರದ ಅನಂತ್‌ನಾಗ್‌ನಲ್ಲಿ ಭಯೋತ್ಪಾದಕರ ಎನ್‌ಕೌಂಟರ್‌ನಲ್ಲಿ ರಾಷ್ಟ್ರೀಯ ರೈಫಲ್ಸ್ ಯೂನಿಟ್‌ಗೆ ಕಮಾಂಡರ್ ಆಗಿರುವ ಭಾರತೀಯ ಸೇನೆಯ ಕರ್ನಲ್, ಕಂಪನಿಯ ಕಮಾಂಡರ್ (ಮೇಜರ್) ಮತ್ತು ಜೆ & ಕೆ ಪೊಲೀಸ್ ಡಿಎಸ್‌ಪಿ ಈ ಕಾರ್ಯಾಚರಣೆಯಲ್ಲಿ ಹುತಾತ್ಮರಾಗಿದ್ದಾರೆ’ ಎಂದು ತಿಳಿಸಿದ್ದಾರೆ.
ಈ ಮಧ್ಯೆ, ಜಮ್ಮು ಮತ್ತು ಕಾಶ್ಮೀರದ ರಾಜೌರಿಯ ನಾರ್ಲಾ ಪ್ರದೇಶದಲ್ಲಿ ಮಂಗಳವಾರ ಆರಂಭವಾದ ಎನ್‌ಕೌಂಟರ್‌ನಲ್ಲಿ ಭದ್ರತಾ ಪಡೆಗಳು ಇಬ್ಬರು ಭಯೋತ್ಪಾದಕರನ್ನು ಹತ್ಯೆಗೈದಿದ್ದಾರೆ.
ಇದನ್ನೂ ಓದಿ: ಪ್ರಧಾನಿ ನಿರ್ಧಾರ ಕಾದು ನೋಡೋಣ: ಬಿಎಸ್‌ವೈ
ಸೆಪ್ಟೆಂಬರ್ 12ರಿಂದ ಭಯತ್ಪಾದಕರು ಹಾಗೂ ಭದ್ರತಾ ಪಡೆ ನಡುವೆ ಭಾರೀ ಗುಂಡಿನ ಚಕಮಕಿ ನಡೆದಿತ್ತು, ಅದೇ ದಿನ ರಾತ್ರಿ ಓರ್ವ ಭಯೋತ್ಪಾದಕನ ಹತ್ಯೆ ಮಾಡಲಾಗಿತ್ತು. ಆದರೆ ಮಾರನೇ ದಿನವಾದ ಇಂದು ಭದ್ರತಾ ಪಡೆಯ ಕರ್ನಲ್,ಮೇಜರ್ ಹಾಗೂ ಪೊಲೀಸ್ ಅಧಿಕಾರಿಯೊಬ್ಬರು ಹುತಾತ್ಮರಾಗಿದ್ದಾರೆ ಎಂದು ತಿಳಿದುಬಂದಿದೆ.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.