ನವದೆಹಲಿ: ಕಾಂಗ್ರೆಸ್ ನಾಯಕ, ಸಂಸದ ರಾಹುಲ್ ಗಾಂಧಿ ತಮ್ಮ ಲುಕ್ ಬದಲಾಯಿಸಿಕೊಂಡಿದ್ದಾರೆ. ಕೇಂಬ್ರಿಡ್ಜ್ ವಿಶ್ವವಿದ್ಯಾಲಯದಲ್ಲಿ ಉಪನ್ಯಾಸ ನೀಡಲು ಲಂಡನ್‌ಗೆ ತೆರಳಿದ್ದು,ಅವರ ಲುಕ್ ಎಲ್ಲರ ಗಮನಸೆಳೆದಿದೆ.
ರಾಹುಲ್ ಗಾಂಧಿ ಕೇಂಬ್ರಿಡ್ಜ್ ವಿಶ್ವವಿದ್ಯಾಲಯದಲ್ಲಿ ವಿಸಿಟಿಂಗ್ ಫೆಲೋ ಭಾಗಿಯಾಗಿದ್ದು ‘Learning to listen in the 21st century’ ಕುರಿತು ಉಪನ್ಯಾಸ ನೀಡಿದ್ದಾರೆ.ಕಟ್ಟಿಂಗ್ ಜೊತೆಗೆ ಗಡ್ಡವನ್ನು ಟ್ರೀಮ್ ಮಾಡಿದ್ದು ಈಗ ರಾಹುಲ್ ಫೋಟೋ ಎಲ್ಲೆಡೆ ವೈರಲ್ ಆಗಿದೆ. ಒಂದು ವಾರದ ಇಂಗ್ಲೆಂಡ್ ಪ್ರವಾಸದಲ್ಲಿರುವ ರಾಹುಲ್ ಗಾಂಧಿ ವ್ಯಾಪಾರ ಸಮುದಾಯದ ಸದಸ್ಯರೊಂದಿಗೆ ಸರಣಿ ಸಂವಾದ ನಡೆಸಲು ನಿರ್ಧರಿಸಿದ್ದಾರೆ ಎಂದು ಪಕ್ಷದ ಮೂಲಗಳು ಹೇಳಿವೆ.
ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಗಡ್ಡವನ್ನು ಬೆಳೆಸಿದ್ದರು. ಮಾತ್ರವಲ್ಲ ಯಾತ್ರೆಯುದ್ದಕ್ಕೂ ಬಿಳಿ ಬಣ್ಣದ ಟಿ-ಶರ್ಟ್‌ನಲ್ಲಿ ಕಾಣಿಸಿಕೊಂಡಿದ್ದರು. ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ನಾಲ್ಕು ತಿಂಗಳ ಪರ್ಯಂತ 3,500 ಕಿ.ಮೀ. ದೂರದ ಪಾದಯಾತ್ರೆಯಲ್ಲಿ ರಾಹುಲ್ ಅವರ ಲುಕ್ ಸಂಪೂರ್ಣವಾಗಿ ಬದಲಾಗಿತ್ತು. ಗಡ್ಡ – ಕೂದಲಿಗೆ ಕತ್ತರಿ ಹಾಕಿದ ಫೋಟೋದಲ್ಲಿ ರಾಹುಲ್ ಗಾಂಧಿ ಕೋಟ್-ಟೈ ಇರುವ ಜಾಕೆಟ್ ನೊಂದಿಗೆ ಕಾಣಿಸಿಕೊಂಡಿದ್ದಾರೆ.