ಬೆಳಗಾವಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಎಲೆಕ್ಷನ್ ಟೈಮ್‌ನಲ್ಲಿ ಬರ್ತಾರೆ, ಎಲೆಕ್ಷನ್ ನಂತರ ಹೋಗ್ತಾರೆ. ಈ ಮಧ್ಯೆ ಏನಾದರೂ ನ್ಯಾಯ ಒದಗಿಸಿಕೊಟ್ಟಿದ್ದಾರಾ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವ್ಯಂಗ್ಯವಾಡಿದ್ದಾರೆ.
ರಾಜ್ಯಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಮೀಸಲಾತಿ ಹೆಸರು ಹೇಳಿ ಗೊಂದಲ ನಿರ್ಮಾಣ ಮಾಡಿದ್ದಾರೆ. ಕಾನೂನಿನಲ್ಲಿ ಈ ರೀತಿ ಮಾಡಲು ಅವಕಾಶ ಎಲ್ಲಿದೆ? ಸಮಾಜದವರು ಯಾರ‍್ಯಾರು ಏನೇನು ಮೀಸಲಾತಿ ಕೇಳ್ತಾರೆ ಅವರಿಗೆ ಕೊಡಬೇಕು ಎಂದು ಅಭಿಪ್ರಾಯಪಟ್ಟರು.
ರಾಜ್ಯದ ಸಿಎಂ ನೇರವಾಗಿ ಬಂದು ಮಾತನಾಡಬೇಕಿತ್ತು. ಕ್ಯಾಬಿನೆಟ್ ಬಳಿಕ ಎಷ್ಟು ಪರ್ಸೆಂಟೇಜ್ ನೀಡಿದ್ದೇವೆಂದು ತಿಳಿಸಬೇಕಿತ್ತು. ಒಕ್ಕಲಿಗರು 12 ಪರ್ಸೆಂಟ್ ಮೀಸಲಾತಿ ಕೇಳುತ್ತಿದ್ದಾರೆ. ಪಂಚಮಸಾಲಿಗಳು ಕೇಳ್ತಿದ್ದಾರೆ ಎಂದು ತಿಳಿಸಿದ್ದಾರೆ.
ಮೀಸಲಾತಿ ಘೋಷಣೆ ವಿಚಾರದಲ್ಲಿ ಸರ್ವಪಕ್ಷ ಸಭೆ ಕರೆಯದ ವಿಚಾರಕ್ಕೆ ಪ್ರತಿಕ್ರಿಯಿಸಿ, ಸರ್ವಪಕ್ಷ ಸಭೆ ಕರೆಯದೇ ಇರೋದೆ ಒಳ್ಳೆಯದಾಯಿತು. ಅವರಿಗೆ ಯಾರ ಬಗ್ಗೆಯೂ ನಂಬಿಕೆ ಇಲ್ಲ. ಅಲ್ಲಿ ಹೋಗಿ ಅವರು ಹೇಳಿದ ಹಾಗೇ ಕೇಳಿ ಬರೋದು ತಪ್ಪಿತು. ಅವನ್ನೆಲ್ಲ ಜನ ಒಪ್ಪಲ್ಲ ಎಂದು ಹೇಳಿದ್ದಾರೆ.