ಬೆಂಗಳೂರು: ಚಂದ್ರಯಾನ-3 ಕುರಿತು ಬಹುಭಾಷಾ ನಟ ಪ್ರಕಾಶ್ ರಾಜ್ ಮಾಡಿದ್ದ ಒಂದು ಟ್ವೀಟ್ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವಿವಾದಕ್ಕೆ ಕಾರಣವಾಗಿತ್ತು. ಚಂದ್ರಯಾನ ನೌಕೆ ಚಂದ್ರನ ಮೇಲೆ ಲ್ಯಾಂಡ್ ಆಗಲು ಸಜ್ಜಾಗಿರುವ ಹೊತ್ತಿನಲ್ಲೇ ಅವರು ಹಂಚಿಕೊಂಡ ‘ಚಾಯ್ ವಾಲಾ’ನ ವ್ಯಂಗ್ಯಚಿತ್ರವೊಂದು ವಿವಾದಕ್ಕೀಡಾಗಿತ್ತು. ‘ಬ್ರೇಕಿಂಗ್ ನ್ಯೂಸ್: ಚಂದ್ರನಿಂದ ಬಂದ ಮೊದಲ ಚಿತ್ರ. ವಿಕ್ರಮ್ ಲ್ಯಾಂಡರ್. ಜಸ್ಟ್ ಆಸ್ಕಿಂಗ್’ ಎಂದು ಟೀ ಮಾರುವವನ ವ್ಯಂಗ್ಯಚಿತ್ರ ಹಂಚಿಕೊಂಡಿದ್ದರು.
ಇದೀಗ ತಮ್ಮ ಪೋಸ್ಟ್‌ಗೆ ವಿರೋಧ ವ್ಯಕ್ತವಾಗುತ್ತಿದ್ದಂತೆ ತಮ್ಮದೇ ಶೈಲಿಯಲ್ಲಿ ಸ್ಪಷ್ಟನೆ ನೀಡಿರುವ ಪ್ರಕಾಶ್ ರಾಜ್, ‘ದ್ವೇಷಕ್ಕೆ ದ್ವೇಷ ಮಾತ್ರ ಕಾಣಿಸುತ್ತದೆ. ನಾನು ಉಲ್ಲೇಖಿಸಿದ್ದು ನಮ್ಮ ಕೇರಳದ ಚಾಯ್ವಾಲಾರನ್ನ ವಿಜೃಂಭಿಸುವ ಆರ್ಮ್‌ಸ್ಟ್ರಾಂಗ್ ಕಾಲದ ಜೋಕ್. ಟ್ರೋಲಿಗರ ಕಣ್ಣಿಗೆ ಕಾಣಿಸಿದ ಚಾಯ್ವಾಲಾ ಯಾರು? ನಿಮಗೆ ಜೋಕ್ ಅರ್ಥವಾಗದಿದ್ದರೆ, ಅದು ನಿಮ್ಮ ಮೇಲೆಯೇ ಮಾಡಿದ ಜೋಕ್ ಆಗುತ್ತದೆ’ ಎಂದು ಟ್ರೋಲಿಗರಿಗೆ ತಿರುಗೇಟು ಕೊಟ್ಟಿದ್ದಾರೆ.
ಇದನ್ನೂ ಓದಿ; ಚಂದ್ರಯಾನ್ ಯೋಜನೆಗೆ ಗೇಲಿ; ಪ್ರಕಾಶ್ ರಾಜ್ ವಿರುದ್ಧ ಶ್ರೀರಾಮಸೇನೆ ದೂರು
ಚಂದ್ರಯಾನ ಕುರಿತು ನಟ ಪ್ರಕಾಶ್ ರಾಜ್ ಮಾಡಿದ್ದ ಟ್ವೀಟ್ ಸಂಬಂಧ ಸೋಮವಾರ ವಾಗ್ದಾಳಿ ನಡೆಸಿರುವ ಮಾಜಿ ಶಾಸಕ ಸಿ.ಟಿ. ರವಿ, ‘ಕೆಲವರಿಗೆ ಭಾರತದ ಅಸ್ಮಿತೆಯ ಬಗ್ಗೆ ಅಸಮಾಧಾನವಿದೆ. ಭಾರತ ಮುಂದುವರಿದರೆ ಅವರಿಗೆ ಅಸಹನೆ, ಸಂಕಟ ಶುರುವಾಗುತ್ತದೆ. ಸಂಕಟವಾದವರು ಅನೇಕ ರೀತಿ ವ್ಯಕ್ತಪಡಿಸುತ್ತಾರೆ; ಪ್ರಕಾಶ್ ರಾಜ್ ಯಾವ ರೀತಿ ವ್ಯಕ್ತಪಡಿಸಿದ್ದಾರೋ ಗೊತ್ತಿಲ್ಲ. ಭಾರತಕ್ಕೆ ವಿಶ್ವಮಟ್ಟದಲ್ಲಿ ಮನ್ನಣೆ ಸಿಕ್ಕಿದ್ರೆ ಕೆಲವರಿಗೆ ಹಿಂದೆ ಹಸಿರು ಮೆಣಸಿನಕಾಯಿ ಇಟ್ಟ ಹಾಗೆ ಆಗುತ್ತದೆ’ ಎಂದು ಹೇಳಿದ್ದರು.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.