ಬೆಂಗಳೂರು : ಚುನಾವಣಾ ಅಕ್ರಮ ಆರೋಪ ಹೊರಿಸಿ ಸಚಿವ ಝಮೀರ್ ಅಹ್ಮದ್ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸುವಂತೆ ಸಲ್ಲಿಸಲಾಗಿರುವ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಅಕ್ಟೋಬರ್ 5ಕ್ಕೆ ಮುಂದೂಡಿದೆ.
ಉಚಿತ ಗ್ಯಾರಂಟಿಗಳ ಆಮಿಷವೊಡ್ಡಿ ಝಮೀರ್ ಅಹ್ಮದ್ ಚುನಾವಣಾ ಅಕ್ರಮ ಎಸಗಿದ್ದಾರೆ. ಹಾಗಾಗಿ ಅವರ ಶಾಸಕ ಸ್ಥಾನ ರದ್ದುಪಡಿಸುವಂತೆ ಚಾಮರಾಜಪೇಟೆ ನಿವಾಸಿ ಶಶಾಂಕ್ ಜೆ. ಶ್ರೀಧರ್ ಎಂಬವರು ಹೈಕೋರ್ಟ್ ಗೆ ಚುನಾವಣಾ ತಕರಾರು ಅರ್ಜಿ ಸಲ್ಲಿಸಿದ್ದಾರೆ. ಗುರುವಾರ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ಐ ಅರುಣ್ ಅವರಿದ್ದ ಪೀಠ, ಚುನಾವಣಾ ತಕರಾರು ಅರ್ಜಿಯ ಪ್ರತಿ ಮತ್ತು ದಾಖಲೆಗಳನ್ನು ಝಮೀರ್ ಅಹ್ಮದ್ ಪರ ವಕೀಲರಿಗೆ ಒದಗಿಸುವಂತೆ ಸೂಚಿಸಿ ವಿಚಾರಣೆಯನ್ನು ಅಕ್ಟೋಬರ್ 5ಕ್ಕೆ ಮುಂದೂಡಿಕೆ ಮಾಡಿತು.
ಇದನ್ನೂ ಓದಿ : ಸರ್ಕಾರಿ ಭೂಮಿ ಅಕ್ರಮ ಮಂಜೂರು ಕೇಸ್; ಎಫ್‌ಐಆರ್ ರದ್ದು ಕೋರಿದ್ದ ಶಾಸಕ ನಂಜೇಗೌಡ ಅರ್ಜಿ ವಜಾ
ವಿಧಾನಸಭಾ ಚುನಾವಣಾ ಪೂರ್ವದಲ್ಲಿ ಕಾಂಗ್ರೆಸ್ ಘೋಷಿಸಿದ್ದ 5 ಗ್ಯಾರಂಟಿಗಳ ಆಮಿಷವೊಡ್ಡಿ ಝಮೀರ್ ಅಹ್ಮದ್ ಮತದಾರರ ಮೇಲೆ ಪ್ರಭಾವ ಬೀರಿದ್ದಾರೆ ಎಂದು ಅರ್ಜಿದಾರ ಶಶಾಂಕ್ ಆರೋಪಿಸಿದ್ದಾರೆ. ಗ್ಯಾರಂಟಿಗಳ ಆಮಿಷವೊಡ್ಡಿರುವುದು ಚುನಾವಣಾ ಅಕ್ರಮಕ್ಕೆ ಸಮ. ಹಾಗಾಗಿ, ಝಮೀರ್ ಅಹ್ಮದ್ ಅವರ ಶಾಸಕ ಸ್ಥಾನ ರದ್ದುಪಡಿಸುವಂತೆ ಕೋರಿದ್ದಾರೆ. ಇದರಿಂದ ಸಚಿವ ಝಮೀರ್ ಅಹ್ಮದ್ ಅವರಿಗೆ ಸಂಕಷ್ಟ ಎದುರಾಗಿದೆ.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.