Tuesday, March 28, 2023
spot_img
- Advertisement -spot_img

ವಿಐಎಸ್ಎಲ್ ಕಾರ್ಖಾನೆ ಮುಚ್ಚುವ ನಿರ್ಧಾರ ಕೇಂದ್ರ ಕೈ ಬಿಡಬೇಕು : ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಒತ್ತಾಯ

ಬೆಂಗಳೂರು : ವಿಐಎಸ್ಎಲ್ ಕಾರ್ಖಾನೆ ಮುಚ್ಚುವ ನಿರ್ಧಾರವನ್ನು ಕೇಂದ್ರ ಸರ್ಕಾರ ಕೈ ಬಿಡಬೇಕು ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದು ಒತ್ತಾಯಿಸಿದ್ದಾರೆ.

ಶಿವಮೊಗ್ಗ ಜಿಲ್ಲೆಯ ಭದ್ರಾವತಿ ಪಟ್ಟಣದಲ್ಲಿರುವ ಕಾರ್ಖಾನೆ ಮರು ಆರಂಭಕ್ಕೆ ಅಗತ್ಯ ಕ್ರಮ ಕೈಗೊಳ್ಳಬೇಕು , ದೇಶಕ್ಕೆ ಅತ್ಯುನ್ನತ ಕೊಡುಗೆಯಾಗಿರುವ ಕಾರ್ಖಾನೆಯನ್ನು ಮುಚ್ಚುವ ತೀರ್ಮಾನ ಸಮಂಜಸವಲ್ಲ, ಕಳೆದ 23 ವರ್ಷಗಳಲ್ಲಿ ಈ ಕಾರ್ಖಾನೆ ಅನೇಕ ಸಂಕಷ್ಟ ಹಾಗೂ ಗೊಂದಲಗಳನ್ನು ಎದುರಿಸಿದೆ.

ರಕ್ಷಣಾ ವಲಯ, ನ್ಯೂಕ್ಲಿಯರ್, ರೈಲ್ವೆ ಮುಂತಾದ ವಿಭಾಗದಲ್ಲಿ ಈ ಕಾರ್ಖಾನೆಯಿಂದ ಮಹತ್ವದ ಸಹಕಾರ ದೊರೆಯಲಿದೆ. ಮುಖ್ಯವಾಗಿ 20 ಸಾವಿರಕ್ಕೂ ಹೆಚ್ಚು ಕುಟುಂಬಗಳು ಇದೇ ಕಾರ್ಖಾನೆ ಅವಲಂಬಿಸಿವೆ. ಹೀಗಾಗಿ ಕಾರ್ಖಾನೆ ಮುಚ್ಚುವ ನಿರ್ಧಾರ ಕೈಬಿಡಬೇಕೆಂದು ಪತ್ರದಲ್ಲಿ ಮಾಜಿ ಪ್ರಧಾನಿ ಒತ್ತಾಯಿಸಿದ್ದಾರೆ.

ಕರ್ನಾಟಕದಲ್ಲಿರುವ ಏಕೈಕ ಸಾರ್ವಜನಿಕ ಸ್ವಾಮ್ಯದ ಉದ್ದಿಮೆ ಇದಾಗಿದ್ದು, ಆತ್ಮನಿರ್ಭರ ಭಾರತದ ಪರಿಕಲ್ಪನೆಗೆ ಪೂರಕವಾಗಿ ಈ ಕಾರ್ಖಾನೆ ಅನೇಕ ಕೊಡುಗೆಗಳನ್ನು ನೀಡುವ ಸಾಮರ್ಥ್ಯ ಹೊಂದಿದೆ. ನಾನು 1996ರಲ್ಲಿ ಪ್ರಧಾನಿಯಾಗಿದ್ದ ವೇಳೆ 650 ಕೋಟಿ ರೂ. ಬಂಡವಾಳ ಹಾಕಿ ಕಾರ್ಖಾನೆ ಆಧುನೀಕರಣ ಮಾಡಲು ತೀರ್ಮಾನಿಸಲಾಗಿತ್ತು. ಅದು ಕೈಗೂಡಲಿಲ್ಲ ಎಂದು ಪತ್ರದಲ್ಲಿ ಬರೆದಿದ್ದಾರೆ.

Related Articles

- Advertisement -

Latest Articles