ಬೆಂಗಳೂರು: ಜೆಡಿಎಸ್ ಪಕ್ಷದ ಸಂಘಟನೆಗೆ ಮತ್ತೆ ಶಕ್ತಿ ತುಂಬಲು ಸೆಪ್ಟೆಂಬರ್ 10ರಂದು ನಗರದ ಅರಮನೆ ಮೈದಾನದಲ್ಲಿ ಬೃಹತ್ ಸಮಾವೇಶ ನಡೆಸಲಾಗುವುದು. ಪಕ್ಷ ಬಲ ಕಳೆದುಕೊಳ್ಳಲು ನಾನು ಅವಕಾಶ ನೀಡುವುದಿಲ್ಲ ಎಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡರು ತಿಳಿಸಿದರು.
ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ರಾಜ್ಯದಲ್ಲಿ ಪ್ರಾದೇಶಿಕ ಪಕ್ಷವನ್ನು ತುಳಿಯುತ್ತಿದ್ದಾರೆ. ಈಗ ಪಕ್ಷವನ್ನು ರಕ್ಷಿಸುವುದು ನನ್ನ ಮುಖ್ಯ ಗುರಿ. 91ರ ವಯಸ್ಸಿನಲ್ಲೂ ಪಕ್ಷಕ್ಕಾಗಿ ದುಡಿಯುತ್ತಿದ್ದೇನೆ, ಈ ಹಂತದಲ್ಲಿ ಕಾರ್ಯಕರ್ತರು ನನ್ನ ಕೈ ಬಿಡಬೇಡಿ’ ಎಂದು ಭಾವುಕರಾದರು.
ಆ ದಿನ ಸಮಾವೇಶದಲ್ಲಿ 20,000ಕ್ಕೂ ಹೆಚ್ಚು ಮಂದಿ ಸೇರುವ ನಿರೀಕ್ಷೆ ಇದೆ. ಕಾರ್ಯಕರ್ತರು ಸ್ವಂತ ಶಕ್ತಿಯಿಂದ ಬಂದು ಭಾಗವಹಿಸಬೇಕು. ಎಲ್ಲ ಜಿಲ್ಲೆಗಳ ಕಾರ್ಯಕರ್ತರು ಸಮಾವೇಶದಲ್ಲಿ ಪಾಲ್ಗೊಳ್ಳಬೇಕು ಎಂದು ಮನವಿ ಮಾಡಿದರು.
ಶಾಸಕ ಜಿ.ಟಿ.ದೇವೇಗೌಡರ ನೇತೃತ್ವದಲ್ಲಿ ಕೋರ್ ಕಮಿಟಿ ರಚಿಸಲಾಗಿದ್ದು, ಸ್ಥಳೀಯ ಸಂಸ್ಥೆಗಳ ಚುನಾವಣೆ ಮತ್ತು ಲೋಕಸಭಾ ಚುನಾವಣೆ ಎದುರಿಸಲು ಕಾರ್ಯತಂತ್ರ ರೂಪಿಸಲಿದೆ. ಎಚ್.ಡಿ.ಕುಮಾರಸ್ವಾಮಿ ಅವರೇ ಪಕ್ಷವನ್ನು ಮುನ್ನಡೆಸುತ್ತಾರೆ ಎಂದರು.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.