Thursday, June 8, 2023
spot_img
- Advertisement -spot_img

ಮತ ಚಲಾಯಿಸಿದ ಮಾಜಿ ಪ್ರಧಾನಿ ಹೆಚ್‌.ಡಿ.ದೇವೇಗೌಡ ಹಾಗೂ ಕುಟುಂಬಸ್ಥರು

ಹಾಸನ: ಮಾಜಿ ಪ್ರಧಾನಿ ಹೆಚ್​.ಡಿ.ದೇವೇಗೌಡ ಪತ್ನಿ ಚೆನ್ನಮ್ಮ ಅವರೊಂದಿಗೆ ಹೆಲಿಕಾಪ್ಟರ್​​ನಲ್ಲಿ ಬಂದು ಮತ ಚಲಾಯಿಸಿದ್ದಾರೆ.

ಪಡುವಲಹಿಪ್ಪೆ ಗ್ರಾಮ ಮತಗಟ್ಟೆ ಸಂಖ್ಯೆ 251ರಲ್ಲಿ ಹಕ್ಕು ಚಲಾವಣೆ ಮಾಡಿದ್ದಾರೆ. ಮಾಜಿ ಸಚಿವ ಎಚ್​.ಡಿ.ರೇವಣ್ಣ ಕುಟುಂಬ ಸಮೇತರಾಗಿ ಆಗಮಿಸಿ ಮತದಾನ ಮಾಡಿದ್ದಾರೆ. ಪಡುವಲಹಿಪ್ಪೆ ಗ್ರಾಮದ 197 ಮತಕೇಂದ್ರದಲ್ಲಿ ಭವಾನಿ ರೇವಣ್ಣ, ಸಂಸದ ಪ್ರಜ್ವಲ್‌ ರೇವಣ್ಣ, ಎಂಎಲ್‌ಸಿ ಸೂರಜ್‌ ರೇವಣ್ಣ ಮತ ಚಲಾಯಿಸಿದ್ದಾರೆ.

ಬರಿಗಾಲಿನಲ್ಲಿ ಆಗಮಿಸಿ ಹಕ್ಕು ಚಲಾಯಿಸುವ ಮೂಲಕ ಎಚ್​.ಡಿ.ರೇವಣ್ಣ ಗಮನ ಸೆಳೆದರು. ಇನ್ನೂ ರಾಮನಗರ ಜಿಲ್ಲೆಯ ಬಿಡದಿ ಹೋಬಳಿಯ ಕೇತಗಾನಹಳ್ಳಿ ಗ್ರಾಮದಲ್ಲಿ ಮಾಜಿ ಮುಖ್ಯಮಂತ್ರಿ ಎಚ್​.ಡಿ. ಕುಮಾರಸ್ವಾಮಿ ಅವರು ಕುಟುಂಬ ಸಮೇತರಾಗಿ ಮತದಾನ ಮಾಡಿದರು. ಪತ್ನಿ ಅನಿತಾ ಕುಮಾರಸ್ವಾಮಿ, ಪುತ್ರ ನಿಖಿಲ್ ಕುಮಾರಸ್ವಾಮಿ ಹಾಗೂ ಸೊಸೆ ರೇವತಿ ನಿಖಿಲ್ ಜೊತೆ ಎಚ್​ಡಿಕೆ ಮತದಾನ ಮಾಡಿದರು.

ಕೇತಗಾನಹಳ್ಳಿಯ ಸರ್ಕಾರಿ ಪ್ರಾಥಮಿಕ ಶಾಲಾ ಮತಗಟ್ಟೆ ಸಂಖ್ಯೆ 235ರಲ್ಲಿ ಮತ ಚಲಾಯಿಸಿದರು. ನಂತರ ಹೆಚ್ ಡಿಕೆ ಮಾತನಾಡಿ, ಈ ಬಾರಿಯ ಚುನಾವಣೆಯಲ್ಲಿ ಕಿಂಗ್ ಮೇಕರ್ ಅಲ್ಲ, ಕಿಂಗ್ ಆಗುವುದು ಖಚಿತ ಎಂದು ಜೆಡಿಎಸ್ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮರಸ್ವಾಮಿಯವರು ಹೇಳಿದ್ದಾರೆ. ಸೂಕ್ತ ಅಭಿವೃದ್ಧಿಗಾಗಿ ಜೆಡಿಎಸ್‌ಗೆ ಮತ ನೀಡಲು ಜನರ ಬಳಿ ಮನವಿ ಮಾಡಿಕೊಳ್ಳುತ್ತೇನೆ. ಈ ಬಾರಿಯ ಚುನಾವಣೆಯಲ್ಲಿ ನಮ್ಮ ಪಕ್ಷ ಕಿಂಗ್ ಮೇಕರ್ ಅಲ್ಲ, ಕಿಂಗ್ ಆಗುವ ವಿಶ್ವಾಸವಿದೆ ಎಂದು ಹೇಳಿದ್ದಾರೆ.

Related Articles

- Advertisement -spot_img

Latest Articles