ಬೆಂಗಳೂರು: ಮಾಜಿ ಪ್ರಧಾನಮಂತ್ರಿ ಹಾಗೂ ಜೆಡಿಎಸ್ನ ರಾಷ್ಟ್ರೀಯ ಅಧ್ಯಕ್ಷರಾಗಿರುವ ಹೆಚ್.ಡಿ ದೇವೇಗೌಡ 91ನೇ ವಸಂತಕ್ಕೆ ಕಾಲಿಟ್ಟಿದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಸೇರಿದಂತೆ ಹಲವು ಗಣ್ಯರು ಶುಭಾಶಯಗಳನ್ನು ಕೋರಿದ್ದಾರೆ.
ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಪ್ರಧಾನಿ ಮೋದಿಯವರು, ದೇವೇಗೌಡ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳನ್ನು ಕೋರಿದ್ದಾರೆ.’ದೇಶಕ್ಕೆ ನಿಮ್ಮ ಕೊಡುಗೆ ಅಪಾರ, ಆರೋಗ್ಯದಿಂದ ಇನ್ನು ಹೆಚ್ಚು ಕಾಲ ಬದುಕಿ ಎಂದು ಪ್ರಾರ್ಥಿಸುತ್ತೇನೆ ಎಂದು ಹೇಳಿದ್ದಾರೆ.