Monday, March 27, 2023
spot_img
- Advertisement -spot_img

ಆರಗ ಮನೆಯಲ್ಲಿ ಲೆಕ್ಕ ಹಾಕಿದ ಹಣದ ಫೋಟೋ ತೆಗೆದವರು ಯಾರು? : ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಗರಂ

ಬೀದರ್: ಗೃಹ ಸಚಿವರ ಮನೆಯಲ್ಲಿ ಹಣದ ಲೆಕ್ಕ ಹಾಕಿರುವ ಫೋಟೋ ವೈರಲ್ ಆಗಿದೆ. ಆರಗ ಮನೆಯಲ್ಲಿ ಲೆಕ್ಕ ಹಾಕಿದ ಹಣದ ಫೋಟೋ ತೆಗೆದವರು ಯಾರು? ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಪ್ರಶ್ನಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿ, ಸ್ಯಾಂಟ್ರೋ ರವಿ ಜೊತೆಗೆ ಸಚಿವರು, ಬಿಜೆಪಿ ನಾಯಕರು ಇರುವ ಫೋಟೋಗಳು ಸಾಮಾಜಿಕ ಜಾಲತಾಣಗಳ ವೈರಲ್ ಆಗುತ್ತಿವೆ. ಅದರಲ್ಲೂ ಮುಖ್ಯವಾಗಿ ಕಂತೆ-ಕಂತೆ ನೋಟುಗಳ ಜೊತೆ ಸ್ಯಾಂಟ್ರೋ ರವಿ ಫೋಟೋ ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದ್ದು, ಆರಗ ಮನೆಯಲ್ಲಿ ಹಣದ ಲೆಕ್ಕ ಹಾಕುತ್ತಿರುವ ಫೋಟೋ ಎಂದು ಮಾಜಿ ಮುಖ್ಯಮಂತ್ರಿ ಎಚ್​ಡಿ ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ.

ಎಸಿಪಿ ವರ್ಗಾವಣೆ ಮಾಡಿಸಲು 15 ಲಕ್ಷ ಹಣ ಎಣಿಸುತ್ತಿರುವುದಂತೆ. ಇದು ಗೃಹಸಚಿವರ ನಿವಾಸದಲ್ಲೇ ನಡೆದಿದೆ, ಈ ಬಗ್ಗೆ ತನಿಖೆಯಾಗಲಿ ಎಂದು ಆಗ್ರಹಿಸಿದರು.ಕುಮಾರಕೃಪಾ ಹೊಸ ಕಟ್ಟಡದಲ್ಲಿ ಏನೆಲ್ಲಾ ನಡೆಯಿತು. ಉಸ್ತುವಾರಿ ಇದ್ದ ದೇವರಾಜನನ್ನು ಯಾಕೆ ಎತ್ತಂಗಡಿ ಮಾಡಿದರು? ನಿಮ್ಮ ತಂದೆಯವರು ಹೇಳಿಕೊಟ್ಟಿದ್ದು ಇದೇನಾ ಬೊಮ್ಮಾಯಿ ಅವರೇ?ಮುಖ್ಯಮಂತ್ರಿ ಮನೆ ಕೂಗಳತೆ ದೂರದಲ್ಲಿ ಇದೆಲ್ಲಾ ಅಸಹ್ಯ ನಡೆದಿದೆ. ಇದೇನಾ ನಿಮ್ಮ ತಂದೆಯವರಿಂದ ಕಲಿತದ್ದು ಎಂದು ಪ್ರಶ್ನಿಸಿದರು.

Related Articles

- Advertisement -

Latest Articles