ಉತ್ತರ ಕನ್ನಡ: ನಿಮ್ಮ ಹೇಳಿಕೆಯಿಂದ ಬೇಸರವಾಗಿದೆ. ನಿಮ್ಮ ಕುಟುಂಬದ ಮೇಲೆ ನಮಗೆ ಅಭಿಮಾನವಿದೆ. ಗೋಕರ್ಣದಲ್ಲೇ ನಿಮ್ಮ ಸ್ಪಷ್ಟೀಕರಣ ತಿಳಿಸಿ ಎಂದು ಕುಮಾರಸ್ವಾಮಿಯರಿಗೆ ಅರ್ಚಕರೊಬ್ಬರು ಸ್ಪಷ್ಟನೆ ಕೇಳಿದ್ದಾರೆ.
ಹೆಚ್. ಡಿ ಕುಮಾರಸ್ವಾಮಿ ಜಿಲ್ಲೆಯ ಕುಮಟಾ ತಾಲೂಕಿನ ಗೋಕರ್ಣ ಮಹಾಬಲೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ ವೇಳೆ ಈ ಘಟನೆ ನಡೆದಿದೆ. ನಾನು ಬ್ರಾಹ್ಮಣ ವಿರೋಧಿ ಹೇಳಿಕೆ ನೀಡಿಲ್ಲ. ನಾನು ಮುಖ್ಯಮಂತ್ರಿ ಯಾಗಿದ್ದಾಗ ಬ್ರಾಹ್ಮಣ ಸಮುದಾಯ ಭವನಕ್ಕೆ ಜಾಗ ಕೊಟ್ಟೆ. ಬ್ರಾಹ್ಮಣ ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡಿದ್ದು ನಾನು. ಸರ್ವೇ ಜನಾಃ ಸುಖಿನೋ ಭವಂತು ಎನ್ನುವ ಬ್ರಾಹ್ಮಣರು ನಮಗೆ ಬೇಕು ರಾಮಕೃಷ್ಣ ಹೆಗಡೆ ಅವರನ್ನ ಸಿಎಂ ಮಾಡಿದ್ದು ದೇವೆಗೌಡರು ಎಂದು ಸ್ಪಷ್ಟನೆ ನೀಡಿದರು.
ಕುಮಾರಸ್ವಾಮಿ ಇಂದು ಗೋಕರ್ಣ ಶ್ರೀ ಮಹಾಬಲೇಶ್ವರ ದೇವಸ್ಥಾನದಲ್ಲಿ ಭೇಟಿ ನೀಡಿ ಆತ್ಮಲಿಂಗ ಸ್ಪರ್ಶಿಸಿ ಪೂಜೆ ಸಲ್ಲಿಸಿದರು. ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ,ಹಿಂದೂ ಧರ್ಮವನ್ನು ನಾವು ರಕ್ಷಣೆ ಮಾಡುತ್ತೇವೆ. ಹಿಂದೂ ಹೆಸರಲ್ಲಿ ಅಧಿಕಾರಕ್ಕೆ ಬಂದು ಏನು ಮಾಡಿದ್ದಾರೆ ಗೊತ್ತಿದೆ. ಬ್ರಾಹ್ಮಣ ಸಮುದಾಯಕ್ಕೆ ಬಿಜೆಪಿ ಏನು ಮಾಡಿದೆ ಹೇಳಿ ? ಎಂದು ಪ್ರಶ್ನೆ ಮಾಡಿದರು.