Sunday, March 26, 2023
spot_img
- Advertisement -spot_img

ಪುತ್ರನಿಗಾಗಿ ಕ್ಷೇತ್ರತ್ಯಾಗಕ್ಕೆ ಮುಂದಾದ ಹೆಚ್‌ಡಿಕೆ, ರಾಮನಗರದಿಂದ ನಿಖಿಲ್‌ ಅಖಾಡಕ್ಕೆ..!

ರಾಮನಗರ: ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ತಮ್ಮ ಪುತ್ರ ನಿಖಿಲ್‌ ಕುಮಾರಸ್ವಾಮಿಗಾಗಿ ಕ್ಷೇತ್ರತ್ಯಾಗಕ್ಕೆ ಮುಂದಾಗಿದ್ದಾರೆ. ರಾಮನಗರ ವಿಧಾನಸಭಾ ಕ್ಷೇತ್ರದಿಂದ ನಿಖಿಲ್‌ ಕುಮಾರಸ್ವಾಮಿ ಅವರನ್ನ ಸ್ಪರ್ಧೆಗಿಳಿಸುವುದಾಗಿ ಘೋಷಣೆ ಮಾಡಿದ್ದಾರೆ.

ಈ ಕುರಿತು ಪಂಚರತ್ನ ಯಾತ್ರೆಯಲ್ಲಿ ಮಾತನಾಡಿದ ಅವರು, ಈಗಾಗಲೇ ನಿಖಿಲ್‌ ಅವರು ರಾಜ್ಯ ರಾಜಕಾರಣದಲ್ಲಿ ಸಕ್ರಿಯವಾಗಿದ್ದಾರೆ. ಅವರ ಹೆಸರನ್ನು ಘೋಷಣೆ ಮಾಡಲು ನನಗೆ ಯಾವುದೇ ಅಂಜಿಕೆಯಿಲ್ಲ. ನಿಖಿಲ್‌ನನ್ನು ದಡ ಸೇರಿಸುವುದು ಹೇಗೆ ಎಂಬ ಚಿಂತನೆಯಿಲ್ಲ. ನನಗೆ ರಾಜಕೀಯವಾಗಿ ಜನ್ಮ ಕೊಟ್ಟಿರುವ ಜನರೇ ತೀರ್ಮಾನಿಸುತ್ತಾರೆ ಎಂದು, ರಾಮನಗರದಿಂದ ನಿಖಿಲ್‌ ಸ್ಪರ್ಧೆಯ ಬಗ್ಗೆ ಸುಳಿವನ್ನು ಬಿಟ್ಟು ಕೊಟ್ಟಿದ್ದಾರೆ. ರಾಜ್ಯದಲ್ಲಿ ನನ್ನ ಪಕ್ಷ 123 ಕ್ಷೇತ್ರದಲ್ಲಿ ಜಯಗಳಿಸಿ ಸ್ವತಂತ್ರವಾಗಿ ಆಡಳಿತಕ್ಕೆ ಬರಬೇಕು ಎನ್ನುವುದು ನನ್ನ ಗುರಿಯಾಗಿದೆ. ನಿಖಿಲ್‌ ಅಭ್ಯರ್ಥಿ ಆಗುವುದರ ಬಗ್ಗೆ ನಮಗೆ ಅಂಜಿಕೆಯಿಲ್ಲ. ಸೂಕ್ತ ಸಂದರ್ಭದಲ್ಲಿ ನಿಖಿಲ್‌ ಅವರನ್ನು ಎಂಎಲ್‌ಎ ಮಾಡುವುದರ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದರು.

Related Articles

- Advertisement -

Latest Articles