ಹಾಸನ: ಕಾಂಗ್ರೆಸ್ನವರು ತಮ್ಮ ಡಕೋಟಾ ಬಸ್ ಹತ್ತಲಿ ಅಂತಾ ಕಾಯುತ್ತಿದ್ದಾರೆ. ಪಾಪ ಶಿವಲಿಂಗೇಗೌಡ ಆ ಬಸ್ ಹತ್ತಿದ್ದಾರೆ, ಎಲ್ಲಿ ನಿಲ್ಲುತ್ತೋ ಗೊತ್ತಿಲ್ಲ ಎಂದು ಹೆಚ್.ಡಿ.ರೇವಣ್ಣ ಲೇವಡಿ ಮಾಡಿದರು.
ಮಾಧ್ಯಮದವರೊಂದಿಗೆ ಮಾತನಾಡಿ, ಅರಸೀಕೆರೆ ಶಾಸಕರಾಗಿದ್ದ ಶಿವಲಿಂಗೇಗೌಡರನ್ನು 15 ವರ್ಷ ಸಾಕಿದ್ದೇನೆ. ಈಗ ಶಿರಸಿಗೆ ಹೋಗಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ನೀನೇ ಸಾಕಿದಾ ಗಿಣಿ ಎಂದು ಅರಸೀಕೆರೆ ಕ್ಷೇತ್ರದ ಜನ ಹೇಳುತ್ತಿದ್ದಾರೆ. ದೇವರೇ ಶಿಕ್ಷೆ ಕೊಡುವ ಕಾಲ ಬರುತ್ತೆ ಎಂದು ವಾಗ್ದಾಳಿ ಮಾಡಿದರು.
ಇದೇ ಎ. 9ರಂದು ಕಾಂಗ್ರೆಸ್ ಸೇರಲು ನಿರ್ಧರಿಸಿರುವ ಮಾಜಿ ಶಾಸಕ ಶಿವಲಿಂಗೇಗೌಡ ಅಂದು ಕ್ಷೇತ್ರದಲ್ಲಿ ಬೃಹತ್ ಸಮಾವೇಶ ಆಯೋಜಿಸಿ “ಕೈ’ ಹಿಡಿಯಲಿದ್ದಾರೆ. ಈ ಮೂಲಕ ಜೆಡಿಎಸ್ ನಾಯಕರಿಗೆ ಟಕ್ಕರ್ ನೀಡಲು ಮುಂದಾಗಿದ್ದಾರೆ. ಈಗಾಗಲೇ ಜೆಡಿಎಸ್ ಗೆ ರಾಜೀನಾಮೆ ಸಲ್ಲಿಸಿರುವ ಶಿವಲಿಂಗೇಗೌಡ ಕಾಂಗ್ರೆಸ್ ಸೇರಲು ರೆಡಿಯಾಗಿದ್ದಾರೆ.