ಬೆಂಗಳೂರು : ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ದಂಪತಿ ಕೃಷ್ಣ ವೇಷ ತೊಟ್ಟ ಮೊಮ್ಮಗ ಅವ್ಯಾನ್ ದೇವ್ ಜೊತೆ ಫೋಟೋ ಶೂಟ್ ಮಾಡಿ ಸಂಭ್ರಮಿಸಿದ್ದಾರೆ.
ನಿಖಿಲ್ ಕುಮಾರ್ ಅವರ ಮಗ ಅವ್ಯಾನ್ ದೇವ್ ಗೆ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ವೇಷ ತೊಡಿಸಲಾಗಿತ್ತು. ಕುಮಾರಸ್ವಾಮಿ ದಂಪತಿ, ನಿಖಿಲ್ ಕುಮಾರ್ ಮತ್ತು ಅವರ ಪತ್ನಿ ರೇವತಿ ಅವ್ಯಾನ್ ಜೊತೆ ಫೋಟೋ ಶೂಟ್ ಮಾಡಿಸಿಕೊಂಡಿದ್ದಾರೆ. ಮುದ್ದು ಕೃಷ್ಣನಾಗಿ ಮಿಂಚಿದ ಅವ್ಯಾನ್ ದೇವ್ ಜೊತೆಗಿನ ಹೆಚ್ ಡಿಕೆ ಕುಟುಂಬಸ್ಥರ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.


ಕಳೆದ ವಾರ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ಹೆಚ್.ಡಿ ಕುಮಾರಸ್ವಾಮಿ, ಡಿಸ್ಚಾರ್ಜ್ ಬಳಿಕ ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ. ಅತ್ತ ಸಂಪೂರ್ಣವಾಗಿ ಸಿನಿಮಾ ರಂಗದಲ್ಲಿ ತೊಡಗಿಸಿಕೊಂಡಿರುವ ನಿಖಿಲ್ ಕುಮಾರ್ ಕೂಡ ಹೊಸ ಸಿನಿಮಾವೊಂದರಲ್ಲಿ ಬ್ಯುಸಿಯಾಗಿದ್ದಾರೆ. ಈ ನಡುವೆ ತಮ್ಮ ಮಗನ ಜೊತೆ ಕೃಷ್ಣ ಜನ್ಮಾಷ್ಟಮಿ ಆಚರಿಸಿ ಸಂಭ್ರಮಿಸಿದ್ದಾರೆ.


ಹಠಾತ್ ಅನಾರೋಗ್ಯಕ್ಕೆ ಒಳಗಾಗಿ ಚೇತರಿಸಿಕೊಳ್ಳುತ್ತಿರುವ ಹೆಚ್ ಡಿಕೆ ಮನೆಯಲ್ಲಿ ವಿಶ್ರಾಂತಿ ಪಡೆದುಕೊಳ್ಳುತ್ತಿದ್ದು, ರಾಜಕೀಯ ಚಟುವಟಿಕೆಗಳಿಂದ ತಾತ್ಕಾಲಿಕ ದೂರ ಉಳಿದಿದ್ದಾರೆ. ಕಳೆದ ವಾರ ರಾತ್ರೋ ರಾತ್ರಿ ಕುಮಾರಸ್ವಾಮಿ ಪಾರ್ಶವಾಯುಗೆ ಒಳಗಾಗಿದ್ದರು. ತಕ್ಷಣ ಚಿಕಿತ್ಸೆ ಪಡೆದ ಪರಿಣಾಮ ದೊಡ್ಡ ಮಟ್ಟದ ಅಪಾಯದಿಂದ ಪಾರಾಗಿರುವುದಾಗಿ ಹೇಳಿದ್ದಾರೆ.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.