Saturday, June 10, 2023
spot_img
- Advertisement -spot_img

ಬಿಜೆಪಿ ವಿರುದ್ಧ ಹರಿಹಾಯ್ದ ಮಾಜಿ ಸಿಎಂ ಹೆಚ್‌ಡಿಕೆ

ಬೆಂಗಳೂರು: ಡಬಲ್​ ಎಂಜಿನ್​ ಬಿಜೆಪಿ ಅಮುಲ್​​ನಲ್ಲಿ ಕೆಎಫ್​​ನನ್ನು ವಿಲೀನ ಮಾಡಲು ಹೊರಟಿದೆ ಎಂದು ವಿರೋಧ ಪಕ್ಷಗಳು ಆರೋಪಿಸುತ್ತಿದ್ದು, ಮಾಜಿ ಸಿಎಂ ಹೆಚ್​.ಡಿ ಕುಮಾರಸ್ವಾಮಿ “ಬಿಜೆಪಿಯ ಭರವಸೆ” ಎಂದು ಹ್ಯಾಷ್​ಟ್ಯಾಗ್​ ಬಳಸಿ ಸರ್ಕಾರದ ವಿರುದ್ಧ ಟ್ವೀಟ್​ ಮಾಡಿದ್ದಾರೆ.

“ಸ್ವಯಂ ಘೋಷಿತ ದೇಶೋದ್ಧಾರಕ ಪಕ್ಷ ಬಿಜೆಪಿ ರಾಜಕಾರಣವೇ ಅನುಮಾನಾಸ್ಪದ. ಒಂದೆಡೆ ಉದ್ಧರಿಸುವ ಮಾತು, ಇನ್ನೊಂದೆಡೆ ಕತ್ತರಿಸುವ ಕೆಲಸ. ಮಾತು ಒಂದು, ಕೃತಿ ಇನ್ನೊಂದು ಇದು ಬಿಜೆಪಿಯ (ಭರ)ವರಸೆ. #ಬಿಜೆಪಿಯ_ವರಸೆ. ಒಂದು ಕಡೆ ಸಫಾರಿ! ಇನ್ನೊಂದು ಕಡೆ ಸುಪಾರಿ ಇದು ಬಿಜೆಪಿಯು ಆದಿಯಿಂದ ನಡೆದುಕೊಂಡು ಬಂದ ದಾರಿ. ಕೆಎಂಎಫ್ ಮತ್ತು ನಂದಿನಿ ವಿಷಯದಲ್ಲೂ ಆ ಪಕ್ಷದ್ದು ಅದೇ ವರಸೆ. ಸ್ಲೋಗನ್ ನಲ್ಲಿ ಮಾತ್ರ ‘ಬಿಜೆಪಿಯೇ ಭರವಸೆ’, ಇದೇ ನೋಡಿ ಅದರ ಅಸಲಿ ವರಸೆ” ಎಂದು ಹೆಚ್​.ಡಿ ಕುಮಾರಸ್ವಾಮಿ ಕಾಲೆಳೆದಿದ್ದಾರೆ.

Related Articles

- Advertisement -spot_img

Latest Articles