ತುಮಕೂರು: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಸಾವು ಬಯಸಿದವರಿಗೆ ತಕ್ಕ ಪಾಠ ಕಲಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಹೇಳಿದರು.
ಮಧುಗಿರಿ ಬಳಿ ಕೈಮರದ ಸಮೀಪ ಮಾತನಾಡಿ, ದೇವೇಗೌಡರ ಹೆಸರು ಉಳಿಸಬೇಕಾಗಿದೆ. ದೇವೇಗೌಡರ ಆಶೀರ್ವಾದದಿಂದ ಗೆದ್ದ ರಾಜಣ್ಣ ಈಗ ದೇವೇಗೌಡರ ಸಾವು ಬಯಸಿದ್ದಾರೆ. ದೇವೇಗೌಡರು ಇನ್ನೂ ನಮ್ಮ ಜೊತೆ ಜೀವಂತವಾಗಿರಬೇಕಂದ್ರೆ ತುಮಕೂರು ಜಿಲ್ಲೆಯ 11 ವಿಧಾನಸಭಾ ಕ್ಷೇತ್ರಗಳನ್ನು ಗೆಲ್ಲಬೇಕು ಎಂದು ಅಭಿಪ್ರಾಯಪಟ್ಟರು.
ಇದೇ ವೇಳೆ ನವಲಗುಂದ ವಿಧಾನಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿ ದೇವರಾಜ ಕಂಬಳಿ ಮಾತನಾಡಿ, ಗ್ರಾಮ ಮಟ್ಟದಿಂದ ಜೆಡಿಎಸ್ ಸಂಘಟನೆ ಮಾಡಲಾಗುತ್ತಿದೆ. ನಾನು ಸಹ ಪ್ರಬಲ ಆಕಾಂಕ್ಷಿಯಾಗಿದ್ದು ರಾಜ್ಯ ನಾಯಕರ ಸೂಚನೆಯಂತೆ ಚುನಾವಣೆ ಎದುರಿಸಲು ಸಿದ್ಧರಾಗುತ್ತೇವೆ. ಬಿಜೆಪಿ ಹಾಗೂ ಕಾಂಗ್ರೆಸ್ ಆಡಳಿತದಿಂದ ಜನರ ಬೇಸತ್ತು ಹೋಗಿದ್ದಾರೆ. ರಾಜ್ಯದಲ್ಲಿ ಈ ಬಾರಿ ಜೆಡಿಎಸ್ ಅಧಿಕಾರದ ಗದ್ದುಗೆ ಹಿಡಿಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.