Saturday, June 10, 2023
spot_img
- Advertisement -spot_img

ನನ್ನ ಹೋರಾಟ ಬಡವರ ಪರವಾಗಿ ಮಾತ್ರ : ಹೆಚ್‌ಡಿಕುಮಾರಸ್ವಾಮಿ

ಮಂಡ್ಯ: ನನ್ನ ಹೋರಾಟವೇನಿದ್ದರೂ ಬಡವರ ಪರವಾಗಿ ಮಾತ್ರ ಎಂದು ಮಾಜಿ ಸಿಎಂ ಹೆಚ್ ಡಿಕೆ ಹೇಳಿದರು. ಜೆಡಿಎಸ್‌ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿ, ನಾನು ಬದುಕಿರೋದು ಬದುಕು ಸರಿಪಡಿಸಲು, ನಾನು ಜಾತಿ- ಮತ- ಭೇದ ಮಾಡಲ್ಲ, ನನ್ನ ಮೇಲೆ ವಿಶ್ವಾಸ ಇಡಿ. ಸಿಕ್ಕ ಅವಕಾಶದಲ್ಲಿ ಸಾಕಷ್ಟು ಅಭಿವೃದ್ಧಿ ಮಾಡಿದ್ದೇನೆ ಎಂದರು.

ಹೆಚ್‌.ಡಿ.ದೇವೇಗೌಡರು 60 ವರ್ಷ ರಾಜಕೀಯ ಮಾಡಿದ್ದು, ಅವರ ಕನಸುಗಳನ್ನು ನನಸು ಮಾಡಲು ಹೋರಾಡುತ್ತಿದ್ದೇನೆ ಎಂದರು.ಈಗಾಗಲೇ ನನಗೆ 2 ಬಾರಿ ಹೃದಯ ಶಸ್ತಚಿಕಿತ್ಸೆಯಾಗಿದೆ, ಎಷ್ಟು ದಿನ ಬದುಕಿರುತ್ತೇನೋ ಗೊತ್ತಿಲ್ಲ. 3ನೇ ಬಾರಿಗೆ ಮುಖ್ಯಮಂತ್ರಿಯಾಗುವ ಉದ್ದೇಶ ನನಗಿಲ್ಲ ಎಂದು ಭಾವುಕರಾಗಿ ನುಡಿದರು.

ಜೀವನದಲ್ಲಿ ಕೊನೆ ಹಂತಕ್ಕೆ ಬಂದುಬಿಟ್ಟಿದ್ದೇನೆ, ದೇವರು ನನ್ನನ್ನು ಕರೆದುಕೊಂಡು ಬಿಡ್ತಾನೆ ಎಂದು ತಿಳಿದುಕೊಂಡಿದ್ದೀರಾ? ಮನಸ್ಸಿನಲ್ಲಿರುವ ಈ ಯೋಚನೆ ತೆಗೆದು ಹಾಕಿ ಎಂದು ದೇವೇಗೌಡರಿಗೆ ಪುತ್ರ ಕುಮಾರಸ್ವಾಮಿ ಸಲಹೆ ನೀಡಿದರು.

ನನ್ನ ಪ್ರಕಾರ ಶಿವ ನಿಮ್ಮನ್ನು ಸದ್ಯಕ್ಕೆ ಕರೆದುಕೊಳ್ಳಲ್ಲ. ನೀವು ಮಾಡಲಿಕ್ಕೆ ಆಗದ ಸಾಧನೆ ನಾನು ಮಾಡುತ್ತೇನೆ. ಇದನ್ನು ನೀವು ನಿಮ್ಮ ಕಣ್ಣಾರೆ ನೋಡಬೇಕು. ನಿಮ್ಮ ಆಸೆಯನ್ನು ಮಕ್ಕಳಾಗಿ ಈಡೇರಿಸುವ ಸವಾಲು ಸ್ವೀಕರಿಸಿದ್ದೇನೆ. ಅಲ್ಲಿಯವರೆಗೂ ನೀವು ಬದುಕಿರುತ್ತೀರಿ. ಯಾವುದೇ ಕಾರಣಕ್ಕೂ ಮಾನಸಿಕ ಚಿಂತನೆಗೆ ಒಳಗಾಗಿ ನಿಮ್ಮ ಪ್ರಾಣ ಹೋಗಬಾರದು ಎಂದು ಕುಮಾರಸ್ವಾಮಿ ಭಾವುಕರಾದರು.

Related Articles

- Advertisement -spot_img

Latest Articles