ರಾಮನಗರ: ದೇಶದ ಅಭಿವೃದ್ಧಿ ಮಾಡಿ ಸುಸ್ತಾಗಿದ್ದಾರೆ, ಪಾಪ ಮೋದಿ ರೆಸ್ಟ್ ಪಡೆಯಲು ರಾಜ್ಯಕ್ಕೆ ಬರುತ್ತಿದ್ದಾರೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ವ್ಯಂಗ್ಯವಾಡಿದರು.
ಸುದ್ದಿಗಾರರೊಂದಿಗೆ ಮಾತನಾಡಿ, ಪ್ರಧಾನಿ ಮೋದಿ ಹುಲಿ ವಿಹಾರಕ್ಕಾಗಿ ಬಂಡೀಪುರಕ್ಕೆ ಬರುತ್ತಿದ್ದಾರೆ. ರಾಜ್ಯದ ಜನರ ಕಷ್ಟಸುಖ ವಿಚಾರಿಸಲು ಅಲ್ಲ. ಕೆಲಸ ಮಾಡಿ ಸುಸ್ತಾಗಿದ್ದಾರೆ. ಹಾಗಾಗಿ ರೆಸ್ಟ್ ಪಡೆಯಲು ಬರುತ್ತಿದ್ದಾರೆ ಎಂದು ಲೇವಡಿ ಮಾಡಿದರು.
ಎರಡು ರಾಷ್ಟ್ರೀಯ ಪಕ್ಷಗಳ ವಿರುದ್ಧ ಏಕಾಂಗಿಯಾಗಿ ಹೋರಾಟ ನನ್ನದಾಗಿದೆ. ಪಂಚರತ್ನ ಕಾರ್ಯಕ್ರಮಗಳನ್ನು ಜಾರಿಗೆ ತರಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ಮತದಾರರು ಯಾವುದೇ ಆಮಿಷಗಳಿಗೆ ಬಲಿಯಾಗಬಾರದು. ಬೇರೆ ಪಕ್ಷಗಳ ಆಮಿಷಗಳಿಗೆ ಬಲಿಯಾಗಬೇಡಿ. ಅವರು ಕೊಡುತ್ತಿರುವ ಕುಕ್ಕರ್ ಬ್ಲಾಸ್ಟ್ ಆಗುತ್ತಿದೆ. ನಕಲಿ ಕುಕ್ಕರ್ ಹಾವಳಿಯಿಂದ ದೂರ ಇರಬೇಕು’ ಎಂದು ಕರೆ ನೀಡಿದರು.
ಜೆಡಿಎಸ್ ಎರಡನೇ ಪಟ್ಟಿ ಬಿಡುಗಡೆ ಮಾಡುತ್ತೇನೆ. ಈಗ ಸಾಕಷ್ಟುಒತ್ತಡಗಳಿದ್ದು, ಒಂದಷ್ಟು ಬದಲಾವಣೆಗಳು ಆಗಬೇಕಿದೆ ಎಂದರು ಪಟ್ಟಿ ಬಿಡುಗಡೆ ವಿಚಾರವಾಗಿ ಪ್ರತಿಕ್ರಿಯಿಸಿದರು.