ಬೆಂಗಳೂರು: ಚಿತ್ರ ನಟಿ ರಮ್ಯಾ ಚನ್ನಪಟ್ಟಣದಿಂದ ಸ್ಪರ್ಧಿಸಿದರೆ ತಲೆ ಕೆಡಿಸಿಕೊಳ್ಳುವುದಿಲ್ಲ ಎಂದು ಜೆಡಿಎಸ್ ನಾಯಕ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿ, ನನ್ನ ಸಹೋದರಿ ಚಿತ್ರ ನಟಿ ರಮ್ಯಾ ಚನ್ನಪಟ್ಟಣ ಕ್ಷೇತ್ರದಿಂದ ಸ್ಪರ್ಧೆ ಮಾಡುತ್ತಾರೆ ಎಂಬ ಮಾತುಗಳು ಕೇಳಿ ಬರುತ್ತಿದೆ. ಆದರೆ, ಅದಕ್ಕೆಲ್ಲ ನಾನು ತಲೆ ಕೆಡಿಸಿಕೊಳ್ಳುವುದಿಲ್ಲ. ಅವರು ಎಲ್ಲಿ ಬೇಕಾದರೂ ಸ್ಪರ್ಧೆ ಮಾಡಬಹುದು. ಚಿತ್ರ ನಟ, ನಟಿಯರಿಗೆ ಕ್ಷೇತ್ರದ ಹಂಗಿಲ್ಲ, ಅವರಿಗೆ ಸಹಜವಾಗಿ ಜನಪ್ರಿಯತೆ ಇರುತ್ತದೆ ಎಂದರು .
ಯಾರ‍್ಯಾರೋ ಏನೇನೋ ವದಂತಿ ಹಬ್ಬಿಸುತ್ತಿದ್ದಾರೆ. ಸಂಸದೆ ಸುಮಲತಾ ಮಂಡ್ಯದಿಂದ ಸ್ಪರ್ಧಿಸಿದರೆ ನಾನು ಅರ್ಜಿ ಹಾಕುತ್ತೇನೆ ಅಂತಲೂ ಹೇಳುತ್ತಿದ್ದಾರೆ. ಅದೆಲ್ಲ ಸುಳ್ಳು. ನಾನು ಚನ್ನಪಟ್ಟಣದಿಂದ ಸ್ಪರ್ಧೆ ಮಾಡುತ್ತೇನೆ. ಎರಡು ಕ್ಷೇತ್ರದಿಂದ ಸ್ಪರ್ಧೆ ಮಾಡುವ ಪ್ರಶ್ನೆಯೂ ಇಲ್ಲ. ಅದೆಲ್ಲ ಊಹಾಪೋಹ ಅಷ್ಟೆʼʼ ಎಂದು ಸ್ಪಷ್ಟಪಡಿಸಿದರು.
ಕಾಂಗ್ರೆಸ್ ಈಗ ಕೊಡುತ್ತಿರುವುದು ಗ್ಯಾರಂಟಿ ಕಾರ್ಡ್ ಅಲ್ಲ, ಅದು ಡುಪ್ಲಿಕೇಟ್ ಕಾರ್ಡ್. ಗೃಹ ಲಕ್ಷ್ಮಿ ಯೋಜನೆಗೆ 25 ಸಾವಿರ ಕೋಟಿ ರೂ. ಬೇಕು. ಇದನ್ನೆಲ್ಲ ಪೂರೈಸುವುದು ಸಾಧ್ಯವೆ ಎಂದು ಪ್ರಶ್ನಿಸಿದರು.