ಶಿವಮೊಗ್ಗ: ಬಿಜೆಪಿ ಮಾಡಿದ ಭ್ರಷ್ಟಾಚಾರವನ್ನ ಮುಕ್ತ ಮಾಡುತ್ತಾರಾ ತಿಳಿಸಲಿ ಎಂದು ಮಾಜಿ ಸಿಎಂ H.D.ಕುಮಾರಸ್ವಾಮಿ ವಾಗ್ದಾಳಿ ಮಾಡಿದರು. ಮಾಧ್ಯಮದವರೊಂದಿಗೆ ಮಾತನಾಡಿ, ಭ್ರಷ್ಟಾಚಾರ ಮುಕ್ತ ರಾಜ್ಯ ಮಾಡುತ್ತೇವೆ ಎಂದು ಕೇಂದ್ರ ಸಚಿವ ಅಮಿತ್ ಶಾ ಹೇಳ್ತಿದ್ದಾರೆ ಮೊದಲು ಮಾಡ್ತಾರಾ ಹೇಳಲಿ ಎಂದು ಕಿಡಿಕಾರಿದರು.
ಬಿ.ಎಸ್.ಯಡಿಯೂರಪ್ಪ ಮುಖನೋಡಿ ಮತ ಹಾಕಿ ಅಂತಿದ್ದಾರೆ, ಆಡಳಿತ ಮಾಡಿದ ಮೂರು ವರ್ಷ ಏನು ಮಾಡಿದ್ದಾರೆ? ಅಮಿತ್ ಶಾ ಭಾಷಣ ವಿಶ್ವದ 8ನೇ ಅದ್ಭುತವಿದ್ದಂತೆ ಎಂದು ವ್ಯಂಗ್ಯವಾಡಿದರು. ಜೆಡಿಎಸ್ ಪಕ್ಷ ಕೇವಲ 2 ಜಿಲ್ಲೆಗಳಿಗೆ ಸೀಮಿತವಾಗಿಲ್ಲ. ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಖಾತೆ ತೆರೆಯುತ್ತೇವೆ. ಉತ್ತರ ಕರ್ನಾಟಕದಲ್ಲಿ ಈ ಬಾರಿ ನಾವು ಹೆಚ್ಚು ಸ್ಥಾನ ಗೆಲ್ಲುತ್ತೇವೆ. ಕರಾವಳಿ ಭಾಗದಲ್ಲಿ ನಾನು ಸಂಚರಿಸಿ ಪಕ್ಷ ಸಂಘಟನೆ ಮಾಡುತ್ತೇವೆ ಎಂದರು.
ಹಾಸನ ಕ್ಷೇತ್ರದ ಜೆಡಿಎಸ್ ಟಿಕೆಟ್ ಗೊಂದಲ ವಿಚಾರವಾಗಿ 300 ಜನ ಪ್ರಮುಖರ ಸಭೆ ಕರೆದಿರುವ ಕುಮಾರಸ್ವಾಮಿ, ಸಭೆಯಲ್ಲಿ ಅಭ್ಯರ್ಥಿ ಯಾರಾದರೆ ಗೆಲುವು ಸುಲಭವಾಗಲಿದೆ ಎಂಬ ಬಗ್ಗೆ ಅಭಿಪ್ರಾಯ ಸಂಗ್ರಹ ಮಾಡಲಾಗುತ್ತಿದೆ ಎಂದು ವಿವರಿಸಿದರು.