ಬೆಂಗಳೂರು: ಸನ್ಮಾನ್ಯ ಅಶೋಕ್ ಭವಿಷ್ಯವನ್ನು, ಸಂಖ್ಯಾಶಾಸ್ತ್ರವನ್ನು ಹೇಳುತ್ತಾರೆ ಎಂದು ನನಗೆ ಈಗಲೇ ಗೊತ್ತಾಗಿದ್ದು ಎಂದು ಮಾಜಿ ಸಿಎಂ ಹೆಚ್ ಡಿಕೆ ವ್ಯಂಗ್ಯವಾಡಿದ್ದಾರೆ.
ಮಾಧ್ಯಮದವರೊಂದಿಗೆ ಮಾತನಾಡಿ, ಜೆಡಿಎಸ್ ಗೆ 20 ಸ್ಥಾನಗಳು ಬರುತ್ತವೆ ಎಂದು ಚಿಕ್ಕಬಳ್ಳಾಪುರದಲ್ಲಿ ಗಿಣಿ ಭವಿಷ್ಯ ಹೇಳಿರುವ ಸಚಿವ ಅಶೋಕ್ ಅವರಲ್ಲೊಬ್ಬರು ‘ಕಾಲಜ್ಞಾನಿ’, ‘ಸಂಖ್ಯಾಜ್ಞಾನಿ’ ಇದ್ದಾರೆ ಎನ್ನುವ ಸೋಜಿಗ ನನಗೆ ಅಚ್ಚರಿ ಉಂಟುಮಾಡಿದೆ , ಚುನಾವಣೆ ನಂತರ ತಮ್ಮ ದುಡಿಮೆಗೆ ದೋಖಾ ಇಲ್ಲ ಎನ್ನುವ ಆತ್ಮವಿಶ್ವಾಸ ಅಶೋಕ್ ಅವರಲ್ಲಿದೆ, ಸಂತೋಷ ಎಂದರು.
ಅಶೋಕ್ ಸಾಹೇಬರು ‘ವಿಜಯ ಸಂಕಲ್ಪ’ಕ್ಕೆ ಬದಲಾಗಿ ‘ಸುಳ್ಳುಸಂಕಲ್ಪ’ ಮಾಡಿಕೊಂಡೇ ರಾಜ್ಯ ಸುತ್ತುತ್ತಿದ್ದಾರೆ. ಅವರ ಸುಳ್ಳುಸಂಕಲ್ಪ ಯಾತ್ರೆಗೆ ನನ್ನ ಶುಭಾಶಯಗಳು ಹಾಗೂ ಗಾಢ ಸಾಂತ್ವನಗಳು ಎಂದು ತಿಳಿಸಿದ್ದಾರೆ.