ಬೆಂಗಳೂರು: ಮುಂಬರುವ ದಿನಗಳಲ್ಲಿ ರಾಜೀ ಇಲ್ಲದೇ ಪಕ್ಷವನ್ನು ಬಲಿಷ್ಟಗೊಳಿಸಲಾಗುವುದು ಎಂದು ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ ಹೇಳಿದರು.
ಸೋಲಿನ ನೋವಿನಲ್ಲಿದ್ದ ಹೆಚ್ ಡಿಕೆ ಸಭೆ ನಡೆಸಿ ಮಾತನಾಡಿ, ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್, ಬಿಜೆಪಿ ಪಕ್ಷಗಳು ಹೇರಳವಾಗಿ ಹಣ ವೆಚ್ಚ ಮಾಡಿವೆ. ಜನರಿಗೆ ಆಮಿಷ ಒಡ್ಡಿವೆ, ಆದ್ರೆ ಅವುಗಳಿಗೆ ಪೈಪೋಟಿ ಕೊಡಲು ನನ್ನಿಂದ ಸಾಧ್ಯವಾಗಲಿಲ್ಲ, ನಾನು ಅಂತಹ ಕೆಲಸ ಮಾಡಲು ಹೋಗಲಿಲ್ಲ ಎಂದರು.
ವೈಯಕ್ತಿಕ ನೆಲೆಗಟ್ಟಿನಲ್ಲಿ ಯಾರನ್ನೂ ನಾವು ಟೀಕೆ ಮಾಡಲಿಲ್ಲ, ತೇಜೋವಧೆ ಮಾಡಲಿಲ್ಲ, ಅಭಿವೃದ್ಧಿ ವಿಷಯ ಇಟ್ಟುಕೊಂಡು ಹೋದೆವು. ಅದಕ್ಕಾಗಿ ನಾವು ಸೋಲಬೇಕಾಯಿತು ಎಂದು ಬೇಸರ ವ್ಯಕ್ತಪಡಿಸಿದರು.
ಸುಳ್ಳು ಗ್ಯಾರಂಟಿಗಳು ಹಾಗೂ ಕೂಪನ್ ಗಳನ್ನು ಕೊಟ್ಟು ಜನರಿಗೆ ವಂಚಿಸಿ ಅಧಿಕಾರಕ್ಕೆ ಬಂದಿದೆ ಕಾಂಗ್ರೆಸ್ ಕುತಂತ್ರದಿಂದ ಗೆದ್ದಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಮ್ಮದೇ ಕುತಂತ್ರಗಾರಿಕೆ ಮಾಡಿದರು ಎಂದು ಟೀಕಿಸಿದರು. ಪಕ್ಷ-ಚುನಾವಣೆ ವೇಳೆ ಆರ್ಥಿಕವಾಗಿ ನಾನೆಷ್ಟು ಕಷ್ಟಪಟ್ಟೆ ಎನ್ನುವುದು ನನಗಷ್ಟೇ ಗೊತ್ತು. ಆ ವೇಳೆ ಯಾರು ನನ್ನ ನೋವು ಕೇಳಲು ಬರಲಿಲ್ಲ
ನಿಮ್ಮ ಸಹಾಯಕ್ಕೆ ನಿಲ್ಲದೆ ಹೋದ ಕಾರಣಕ್ಕೆ ಸಾರ್ವಜನಿಕವಾಗಿ ಕ್ಷಮೆ ಕೇಳುತ್ತೇನೆ. ಕಾಂಗ್ರೆಸ್ ಪಕ್ಷ ವ್ಯವಸ್ಥಿತವಾಗಿ ಅಪಪ್ರಚಾರ ನಡೆಸಿತು ಎಂದರು.