Saturday, June 10, 2023
spot_img
- Advertisement -spot_img

ನವೆಂಬರ್ ವೇಳೆಗೆ ರಾಜಕಾರಣದಲ್ಲಿ ದೊಡ್ಡಬದಲಾವಣೆಯಾಗುತ್ತೆ: ಹೆಚ್.ಡಿ.ಕುಮಾರಸ್ವಾಮಿ

ರಾಮನಗರ: ನವೆಂಬರ್ ಬರೋ ವೇಳೆಗೆ ರಾಜಕಾರಣದಲ್ಲಿ ಮಹತ್ತರ ಬದಲಾವಣೆಯಾಗುತ್ತೆ ಎಂದು ಹೆಚ್ ಡಿ ಕುಮಾರಸ್ವಾಮಿ ಅಭಿಪ್ರಾಯಪಟ್ಟಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡಿ, ಲೋಕಸಭಾ ಚುನಾವಣೆ ಬಳಿಕ ಏನು ಬೆಳವಣಿಗೆ ಆಗುತ್ತದೆ ಎಂದು ನೋಡೋಣ, ಈಗಿನ ರಾಜಕೀಯ ಬೆಳವಣಿಗೆ ಬಗ್ಗೆ ಯಾವುದೇ ಅಂಜಿಕೆ ಬೇಡ, ಯಾರನ್ನು ಎಲ್ಲಿ ಹಿಡಿಯಬೇಕೆಂದು ನನಗೆ ಚೆನ್ನಾಗಿ ತಿಳಿದಿದೆ. ನಾನು ಹೋರಾಟ ಮಾಡಲು ಸಿದ್ಧನಿದ್ದೇನೆ. ಯಾವುದೇ ಕಾರಣಕ್ಕೂ ಈ ಸರ್ಕಾರದ ಮಂತ್ರಿಗಳ ಬಳಿ ಕೈ ಚಾಚುವುದಿಲ್ಲ, ಬಿಜೆಪಿಯವರು ಲೂಟಿ ಮಾಡಿದ ರೀತಿಯಲ್ಲೆ ಕಾಂಗ್ರೆಸ್‌ನವರು ಲೂಟಿಗೆ ಇಳಿಯಲಿದ್ದಾರೆ. ಅದರಲ್ಲೇನೂ ಹೊಸತಿಲ್ಲ ಎಂದು ಅಭಿಪ್ರಾಯಪಟ್ಟರು.

ಕಾಂಗ್ರೆಸ್ ನೀಡಿರುವ ಗ್ಯಾರಂಟಿ ಸೇರಿದಂತೆ ಯಾವುದೇ ಯೋಜನೆಯನ್ನು ಜಾರಿಗೆ ತರುವುದು ಸುಲಭವಲ್ಲ. ಜೆಡಿಎಸ್ ಈ ಬಾರಿ 60 ಕ್ಕಿಂತ ಹೆಚ್ಚು ಸ್ಥಾನಗಳಲ್ಲಿ ಗೆಲ್ಲಬೇಕಿತ್ತು. ಎಲ್ಲಾ ಲೆಕ್ಕಾಚಾರ ಮಾಡಿಯೇ ಸ್ಕೀಂ ಮಾಡಿರುತ್ತಾರೆ. ಮೊದಲು ಫ್ರೀ ಅಂತ ಹೇಳಿ ಈಗ ಕೆಲವೊಂದು ಷರತ್ತು ಹಾಕ್ತಿದ್ದಾರೆ. ನೋಡೋಣ ಮುಂದೆ ಏನ್ ಮಾಡ್ತಾರೆ ಅಂತ ಎಂದರು.

ಪಂಚರತ್ನ ಯೋಜನೆ ಜನರಿಗೆ ಹಿಡಿಸಲಿಲ್ಲ ಅನ್ಸುತ್ತೆ. ಕಾಂಗ್ರೆಸ್‍ನ ಗ್ಯಾರಂಟಿಗಳ ನಂಬಿ ಮತಹಾಕಿದ್ದಾರೆ. ಪಕ್ಷದ ಕಾರ್ಯಕರ್ತರ ಜೊತೆ ಚರ್ಚೆ ಮಾಡಿ ಏನೆಲ್ಲಾ ಆಗಿದೆ ಅನ್ನೋದರ ಬಗ್ಗೆ ಮಾಹಿತಿ ಕಲೆ ಹಾಕುತ್ತೇನೆ ಎಂದು ತಿಳಿಸಿದರು.

Related Articles

- Advertisement -spot_img

Latest Articles