ವಿಜಯಪುರ: ಪ್ರಧಾನಿ ನರೇಂದ್ರ ಮೋದಿ ನಾಳೆ ರಾಜ್ಯಕ್ಕೆ ಆಗಮಿಸಲಿದ್ದು, ಪ್ರಧಾನಿ ಮೋದಿ ಭೇಟಿಗೆ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ.
ಮಾಧ್ಯಮದವರೊಂದಿಗೆ ಮಾತನಾಡಿ, ರಾಜ್ಯದಲ್ಲಿ ಒಂದು ತಿಂಗಳಲ್ಲಿ 25 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ರೈತರ ಸಮಸ್ಯೆಗೆ ಪ್ರಧಾನಿ ಮೋದಿ ಯಾವ ರೀತಿ ಸ್ಪಂದಿಸಲಿದ್ದಾರೆ ನೋಡೋಣ ಹಕ್ಕುಪತ್ರ ವಿತರಣೆ ಒಂದು ನಾಟಕ , ಏನೋ ಒಂದು ಕಾರ್ಯಕ್ರಮ ಮಾಡಬೇಕು ಎಂದು ಮಾಡುತ್ತಿದ್ದಾರಷ್ಟೇ ಎಂದು ಹೇಳಿದರು.
ರಾಜ್ಯ ಬಿಜೆಪಿಗೆ ಜನಪರ ಕೆಲಸ ಮಾಡೋ ಶಕ್ತಿ ಇಲ್ಲ, ಈಗ ಸ್ಕಾಡಾ ಯೋಜನೆ ಉದ್ಘಾಟನೆಗೆ ಮೋದಿ ಬರ್ತಾ ಇದ್ದಾರೆ ಏನು ಸಂದೇಶ ಕೊಡ್ತಾರೆ ನೋಡೋಣ ಎಂದು ವ್ಯಂಗ್ಯವಾಡಿದರು. ಪ್ರಧಾನಿ ಮೋದಿ ರಾಜ್ಯಕ್ಕೆ ನೂರು ಬಾರಿ ಬಂದರೂ ಮುಂದಿನ ಚುನಾವಣೆಯಲ್ಲಿ ಬಿಜೆಪಿ ಗೆಲ್ಲುವುದಿಲ್ಲ. ಕಾಂಗ್ರೆಸ್ ಗೆ ಶಕ್ತಿ ಇಲ್ಲ, ಜೆಡಿಎಸ್ ಪಕ್ಷಕ್ಕೆ ಬಹುಮತ ಸಿಗಲಿದೆ ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಕರ್ನಾಟಕಕ್ಕೆ ನೂರು ಬಾರಿ ಬಂದರೂ ಬಿಜೆಪಿ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ, ಜೆಡಿಎಸ್ ಪಕ್ಷಕ್ಕೆ ಯಾವ ಆತಂಕವೂ ಇಲ್ಲ ಎಂದು ಹೇಳಿದ್ದಾರೆ.