ಬೆಂಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯಗೆ ತಮ್ಮ ಪಕ್ಷದಲ್ಲಿಯೇ ವಿರೋಧಿಗಳಿದ್ದು, ಅವರೇ ತಮ್ಮನ್ನ ಸೋಲಿಸುವ ಭಯ ಸಿದ್ದರಾಮಯ್ಯಗೆ ಕಾಡುತ್ತಿದೆ ಅಂತ ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ರಾಷ್ಟ್ರೀಯ ಪಕ್ಷದಲ್ಲಿ ಮುಖ್ಯಮಂತ್ರಿ ಅಭ್ಯರ್ಥಿಗೆ ಕ್ಷೇತ್ರ ಸಿಗುತ್ತಿಲ್ಲ ಅಂದರೆ ಏನರ್ಥ? ಅವರಿಗೆ ಇಂಥ ಸ್ಥಿತಿ ಬರಬಾರದಿತ್ತು. ಈ ರೀತಿ ಗೊಂದಲ ಸೃಷ್ಟಿ ಮಾಡಿದ್ದು ಅವರ ಪಕ್ಷದವರೇ ಎಂದು ಹೇಳಿದ್ದಾರೆ.
ಸಿದ್ದರಾಮಯ್ಯಗೆ ಅವರ ಪಕ್ಷದಲ್ಲಿ ವಿರೋಧಿಗಳು ಇದ್ದಾರೆ. ಆ ವಿರೋಧಿ ಟೀಂ ಸಿದ್ದರಾಮಯ್ಯ ಅವರನ್ನು ಮುಗಿಸುವ ಭಯ ಅವರಿಗೆ ಕಾಡುತ್ತಿದೆ. ಹೀಗಾಗಿ ಕ್ಷೇತ್ರದ ಗೊಂದಲ ಇದೆ. ಆದರೆ ನಮಗೆ ಅಂತಹ ಗೊಂದಲ ಇಲ್ಲ ಎಂದರು.
26 ಕ್ಕೆ ಪಕ್ಷದ ಎರಡನೇ ಪಟ್ಟಿ ರಿಲೀಸ್ ಮಾಡ್ತೀವಿ. ಸುಮಾರು 50-60 ಜನರ ಎರಡನೇ ಪಟ್ಟಿ ರಿಲೀಸ್ ಮಾಡ್ತೀವಿ ಎಂದರು. ಕಾಂಗ್ರೆಸ್ನವರದ್ದು ಗ್ಯಾರಂಟಿ ಕಾರ್ಡ್ ಅಲ್ಲ, ಡೂಪ್ಲಿಕೇಟ್ ಕಾರ್ಡ್. ಕಾಂಗ್ರೆಸ್, ಬಿಜೆಪಿ ಬಗ್ಗೆ ಮಾತನಾಡಿ ಸಮಯ ವ್ಯರ್ಥ ಮಾಡುವುದಿಲ್ಲ. ಟೀಕೆಯಿಂದ ಜನರಿಗೆ ಯಾವುದೇ ಪ್ರಯೋಜನವಿಲ್ಲ ಎಂದರು.