ಬೆಂಗಳೂರು: ಯಾರೂ ವಿದ್ಯುತ್ ಬಿಲ್ ಕಟ್ಟಬೇಡಿ, ಮಹಿಳೆಯರು ಟಿಕೆಟ್ ಪಡೆಯಬೇಡಿ. ಉಚಿತವಾಗಿ ಸರ್ಕಾರಿ ಬಸ್ಗಳಲ್ಲಿ ಪ್ರಯಾಣಿಸಿ ಎಂದು ಮಾಜಿ ಸಿಎಂ ಹೆಚ್. ಡಿ.ಕುಮಾರಸ್ವಾಮಿ ಮನವಿ ಮಾಡಿದರು.
ಮಾಧ್ಯಮದವರೊಂದಿಗೆ ಮಾತನಾಡಿ, 5 ಗ್ಯಾರಂಟಿ ಫ್ರೀ ಎಂದಿದ್ದ ಸಿದ್ದರಾಮಯ್ಯ, ಮೊದಲ ಸಂಪುಟದಲ್ಲೇ ಗ್ಯಾರಂಟಿ ಜಾರಿ ಮಾಡುತ್ತೇವೆ ಎಂದಿದ್ದರು. ಆದರೆ ಈವರೆಗೆ ಜಾರಿ ಮಾಡಿಲ್ಲ. ಅವರು ಕುತಂತ್ರ ರಾಜಕಾರಣ ನಡೆಸಿ ರಾಜ್ಯದ ಜನರನ್ನು ವಂಚಿಸಿದ್ದಾರೆ ಎಂದರು.
ಚುನಾವಣೆಗೂ ಮುನ್ನ ಕಾಂಗ್ರೆಸ್ ನಿನಗೂ ಫ್ರೀ ನನಗೂ ಫ್ರೀ ಎಂದು ಸಿದ್ದರಾಮಯ್ಯ ಹೇಳಿದ್ದರು. ಆದರೀಗ ಕಂಡಿಷನ್ಸ್ ಹಾಕುವ ಬಗ್ಗೆ ಮಾತನಾಡುತ್ತಿದ್ದಾರೆ, ಗ್ಯಾರಂಟಿ ಹೆಸರಲ್ಲಿ ಜನರನ್ನು ಮೋಸ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
200 ಯುನಿಟ್ ವಿದ್ಯುತ್ ಉಚಿತವಾಗಿ ನೀಡುವುದಾಗಿ ಕಾಂಗ್ರೆಸ್ ಘೋಷಿಸಿದೆ. ಹಾಗಾಗಿ ರಾಜ್ಯದ ಜನರು ಯಾರೂ ವಿದ್ಯುತ್ ಬಿಲ್ ಕಟ್ಟಬೇಡಿ ಎಂದು ಕರೆ ನೀಡಿದರು. ಮತದಾನಕ್ಕೂ ಮುನ್ನ ಕಾಂಗ್ರೆಸ್ ನಾಯಕರು ಕೂಪನ್ ಕಾರ್ಡ್ ಗಳನ್ನು ಹಂಚಿದ್ದಾರೆ. ಈ ಮೂಲಕ ಅಮಾಯಕ ಜನರಿಗೆ 5 ಸಾವಿರ ಮೌಲ್ಯದ ಗಿಫ್ಟ್ ಕೊಡ್ತೀವಿ ಎಂದು ಕೂಪನ್ ಹಂಚಿ ವಂಚಿಸಿದ್ದಾರೆ. 30 ಕೋಟಿ ಗಿಫ್ಟ್ ನ್ನು ಕಾಂಗ್ರೆಸ್ ಈಗ ಜನರಿಗೆ ನೀಡಬೇಕು ಎಂದು ಆಗ್ರಹಿಸಿದರು.