ಕಲಬುರಗಿ: ಉತ್ತರ ಕರ್ನಾಟಕ ಭಾಗದಿಂದ 30 ರಿಂದ 40 ಅಭ್ಯರ್ಥಿಗಳ ಗೆಲವು ಖಚಿತ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದರು. ಮಾಧ್ಯಮದವರೊಂದಿಗೆ ಮಾತನಾಡಿ, ಮತ ಪರಿವರ್ತನೆ ಆಗುವಂತ ಬಲಿಷ್ಠ ಅಭ್ಯರ್ಥಿಗಳು ಸಂಪರ್ಕದಲ್ಲಿದ್ದು, ದೊಡ್ಡ ಮಟ್ಟದಲ್ಲಿ ಬದಲಾವಣೆ ಆಗಲಿದೆ. ನಾಳೆ ಅನೇಕರು ಬೆಂಗಳೂರಿನಲ್ಲಿ ಜೆಡಿಎಸ್ ಸೇರ್ಪಡೆ ಆಗಲಿದ್ದಾರೆ ಎಂದು ತಿಳಿಸಿದರು.
ನಾಳೆ ಎರಡನೇ ಹಂತದ ಜೆಡಿಎಸ್ ಅಭ್ಯರ್ಥಿಗಳ ಲಿಸ್ಟ್ ಬಿಡುಗಡೆ ಮಾಡಲಾಗುವುದು. ನಿರಂತರವಾಗಿ ಪಕ್ಷ ಸಂಘಟನೆಗೆ ಓಡಾಡುತ್ತಿರುವುದರಿಂದ ಬಿಡುವಿಲ್ಲದೇ ಎರಡನೇ ಹಂತದ ಟಿಕೆಟ್ ಹಂಚಿಕೆ ಲಿಸ್ಟ್ ಬಿಡುಗಡೆ ಮಾಡಲು ಆಗಿಲ್ಲ. ನಾಳೆ ಎರಡನೇ ಲಿಸ್ಟ್ ಕೂಡಾ ಬಿಡುಗಡೆ ಮಾಡಲಾಗುವುದು.
123 ಸೀಟು ಗೆಲ್ಲವು ಯೋಜನೆಗೆ ಏನೆಲ್ಲ ಸರ್ಕಸ್ ಮಾಡ್ಬೇಕು ಮಾಡ್ತಿದ್ದೇವೆ ಎಂದು ಹೇಳಿದರು.ಯಾವುದೇ ಕಾರಣಕ್ಕೂ ಸಮ್ಮಿಶ್ರ ಸರ್ಕಾರ ರಾಜ್ಯದಲ್ಲಿ ಬರುವುದಿಲ್ಲ. ಬದಲಿಗೆ ಜೆಡಿಎಸ್ ಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ರಾಜ್ಯದ 123 ಕ್ಷೇತ್ರದಲ್ಲಿ ಗೆಲುವು ಸಾಧಿಸಬೇಕು ಎಂಬ ಉದ್ದೇಶ ಇಟ್ಕೊಂಡು ಜೆಡಿಎಸ್ ಕಾರ್ಯತಂತ್ರ ಮಾಡುತ್ತಿದೆ ಎಂದು ಇದೇ ವೇಳೆ ತಿಳಿಸಿದರು.