ಕೋಲಾರ: ರಾಜ್ಯದಲ್ಲಿ ಜೆಡಿಎಸ್ ಸರ್ಕಾರ ಬಂದರೆ ರೈತ ಮಕ್ಕಳನ್ನು ಮದುವೆಯಾದವರಿಗೆ 2 ಲಕ್ಷ ರೂ. ಅನುದಾನ ನೀಡುತ್ತೇವೆ ಎಂದು ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ ಘೋಷಣೆ ಮಾಡಿದ್ದಾರೆ.
ಜಿಲ್ಲೆಯ ಶಿನಿಗೇನಹಳ್ಳಿಯಲ್ಲಿ ನಡೆದ ಸಮಾವೇಶದಲ್ಲಿ ಮಾತನಾಡಿ, ಇದ್ರ ಜೊತೆಗೆ ಅಧಿಕಾರಕ್ಕೆ ಬಂದ ನಂತರ ರಾಜ್ಯದಲ್ಲಿರುವ ಸ್ತ್ರೀ ಶಕ್ತಿ ಸಂಘಗಳ ಸಾಲ ಮನ್ನಾ ಮಾಡುತ್ತೇವೆ ಎಂದು ಭರವಸೆ ನೀಡಿದರು.
ನೋಡಿ ನಮ್ದು ರೈತರ ಪಕ್ಷ. ಪ್ರಾದೇಶಿಕ ಪಕ್ಷ ಇಲ್ಲದೇ ಒಂದು ರಾಜ್ಯ ಅಭಿವೃದ್ಧಿ ಆಗಲು ಸಾಧ್ಯವಿಲ್ಲ. ನಮ್ಮ ಪಕ್ಷ ಈ ಬಾರಿ ಅಧಿಕಾರಕ್ಕೆ ಬಂದರೆ ರೈತರ ಮಕ್ಕಳನ್ನ ಮದುವೆಯಾಗುವ ಯುವತಿಯರಿಗೆ ಎರಡು ಲಕ್ಷ ರೂ ಪ್ರೋತ್ಸಾಹ ಧನ ನೀಡಲಾಗುವುದು ಎಂದು ಘೋಷಣೆ ಮಾಡಿದ್ದಾರೆ.
ಇನ್ನೂ ಮೀಸಲಾತಿ ವಿಚಾರದಲ್ಲಿ ಬಿಜೆಪಿ ಸರ್ಕಾರ ಹುಡುಗಾಟಿಕೆ ಮಾಡ್ಇದೆ, ನಾವು ಅಧಿಕಾರಕ್ಕೆ ಬಂದರೆ ಗೊಂದಲ ಸರಿಪಡಿಸುತ್ತೇವೆ ಎಂದು ಭರವಸೆ ನೀಡಿದರು. ಮತದಾರರನ್ನು ಸೆಳೆಯುವ ಪ್ರಯತ್ನದಿಂದ ಸಮಾವೇಶಕ್ಕೆ ಆಗಮಿಸಿದ್ದ ಜನರ ಬೈಕ್ಗಳಿಗೆ ಉಚಿತ ಪೆಟ್ರೋಲ್ ವ್ಯವಸ್ಥೆ ಕಲ್ಪಿಸಲಾಗಿತ್ತು, ಸಾವಿರಾರು ಜನರು ಕ್ಯೂ ನಲ್ಲಿ ನಿಂತು ಪೆಟ್ರೋಲ್ ಹಾಕಿಸಿಕೊಂಡರು.