ಹಾಸನ: ಮಾಜಿ ಸಚಿವ ಹೆಚ್ ಡಿ ರೇವಣ್ಣ ಸೋಮವಾರ ಹೊಳೆನರಸೀಪುರದಲ್ಲಿ ಚುನಾವಣಾ ಪ್ರಚಾರ ಆರಂಭಿಸಿದ್ದಾರೆ. ಪತ್ನಿ ಭವಾನಿಗೆ ಹಾಸನ ಟಿಕೆಟ್ ಕೊಡಿಸಲು ಪ್ರಯತ್ನಿಸಿದ್ದಾರೆ.
ಮಾಧ್ಯಮದವರೊಂದಿಗೆ ಮಾತನಾಡಿ, ಹಾಸನ ಟಿಕೆಟ್ ವಿಚಾರವಾಗಿ ಹೆಚ್ ಡಿ ಕುಮಾರಸ್ವಾಮಿ ಅವರೊಂದಿಗೆ ಒಂದೆರಡು ಗಂಟೆಗಳ ಕಾಲ ಚರ್ಚೆ ನಡೆಸಿದ್ದು, ಟಿಕೆಟ್ ವಿಚಾರವನ್ನು ತಂದೆ ದೇವೇಗೌಡರು ಬಗೆಹರಿಸುತ್ತಾರೆ ಎಂಬ ವಿಶ್ವಾಸವಿದೆ, ತಂದೆಯ ನಿರ್ಧಾರಕ್ಕೆ ಬದ್ಧವಾಗಿರುವುದಾಗಿ ರೇವಣ್ಣ ಹೇಳಿದ್ದಾರೆ ಎಂದರು.
ಇನ್ನೂ ಸಂಧಾನ ವಿಫಲವಾಗಿದ್ದು, ದೊಡ್ಡಗೌಡರ ಮನೆಯಿಂದ ಭವಾನಿ ರೇವಣ್ಣ ಅಸಮಾಧಾನದಿಂದ ಹೊರ ನಡೆದಿದ್ದಾರೆ ಎನ್ನಲಾಗಿದೆ, ಹೆಚ್.ಡಿ.ರೇವಣ್ಣ ಮತ್ತು ಹೆಚ್.ಡಿ.ಕುಮಾರಸ್ವಾಮಿ ಮತ್ತು ಸೊಸೆ ಭವಾನಿ ಅವರೊಂದಿಗೆ ಮತ್ತೊಂದು ಸುತ್ತಿನ ಮಾತುಕತೆ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.
ಭವಾನಿ ಅವರಿಗೆ ಜೆಡಿಎಸ್ ಟಿಕೆಟ್ ನೀಡದಿದ್ದರೆ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿಸುವುದಾಗಿ ರೇವಣ್ಣ ಬೆದರಿಕೆ ಹಾಕಿದ್ದಾರೆ ಎಂದು ಮೂಲಗಳು ತಿಳಿಸಿವೆ.