Wednesday, May 31, 2023
spot_img
- Advertisement -spot_img

ಯುವ ಘಟಕಕ್ಕೆ ಪ್ರಜ್ವಲ್ ಆಕಾಂಕ್ಷಿ ಅಲ್ಲ,ಭವಾನಿಯವ್ರಿಗೆ ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನ ಕೇಳಿಲ್ಲ

ಬೆಂಗಳೂರು: ಜೆಡಿಎಸ್ ಯುವ ಘಟಕದ ಅಧ್ಯಕ್ಷ ಸ್ಥಾನಕ್ಕೆ ಪ್ರಜ್ವಲ್ ರೇವಣ್ಣ ಆಕಾಂಕ್ಷಿ ಅಲ್ಲ ಎಂದು ಮಾಜಿ ಸಚಿವ ಹೆಚ್. ಡಿ. ರೇವಣ್ಣ ಹೇಳಿದರು.

ಮಾಧ್ಯಮದವರೊಂದಿಗೆ ಮಾತನಾಡಿ, ಸಿಎಂ ಇಬ್ರಾಹಿಂ ಅವರೇ ರಾಜ್ಯಾಧ್ಯಕ್ಷರಾಗಿ ಮುಂದುವರೆಯಲಿದ್ದಾರೆ ಎಂದು ಸ್ಪಷ್ಟನೆ ನೀಡಿದರು. ಪಕ್ಷದ ಯುವ ಘಟಕದ ಅಧ್ಯಕ್ಷ ಸ್ಥಾನಕ್ಕೆ ಪ್ರಜ್ವಲ್ ರೇವಣ್ಣ ಆಕಾಂಕ್ಷಿ ಅಲ್ಲ, ಯುವ ಘಟಕದ ಅಧ್ಯಕ್ಷ ಹುದ್ದೆಯನ್ನು ಕೇಳಿಲ್ಲ, ಅದೆಲ್ಲ ಯಾರು ಹೇಳ್ತಾರೋ ಗೊತ್ತಿಲ್ಲ, ನಾಳೆ ಪಕ್ಷದ ಸಭೆ ಇದ್ದು, ಸಭೆಯಲ್ಲಿ ಎಲ್ಲರ ಅಭಿಪ್ರಾಯ ಪಡೆದು ಮುಂದುವರೆಯಲಾಗುತ್ತದೆ ಎಂದು ತಿಳಿಸಿದರು.

ಚುನಾವಣೆಯಲ್ಲಿ ಸತತ ಸೋಲುಗಳಿಂದ ಕಂಗೆಟ್ಟಿರುವ ನಿಖಿಲ್​ ಕುಮಾರಸ್ವಾಮಿ ಜೆಡಿಎಸ್‌ನ ಯುವ ಘಟಕದ ಅಧ್ಯಕ್ಷ ಸ್ಥಾನಕ್ಕೆ ನಿಖಿಲ್ ಕುಮಾರಸ್ವಾಮಿ ರಾಜೀನಾಮೆ ನೀಡಲಿದ್ದಾರೆ ಎನ್ನಲಾಗಿದೆ. ಸದ್ಯಕ್ಕೆ ರಾಜಕೀಯ ಚಟುವಟಿಕೆಗಳಿಂದ ದೂರವಿದ್ದು, ಸಿನಿಮಾದಲ್ಲಿ ತೊಡಗಿಸಿಕೊಳ್ಳಲು ಗಂಭೀರ ಚಿಂತನೆ ನಡೆಸಿದ್ದಾರೆ ಅಂತಾ ಹೇಳಲಾಗ್ತಿದೆ. ಈ ಬಗ್ಗೆ ಕುಟುಂಬದವರೊಂದಿಗೆ ಚರ್ಚಿಸಲಿದ್ದಾರೆ.

ಇನ್ನೂ ಭವಾನಿ ರೇವಣ್ಣಗೆ ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನ ಕೊಡುವ ಕುರಿತು ನಾವೇನು ಕೇಳಿಲ್ಲ, ಯಾಕೆ ಸುಮ್ನೆ ಇವೆಲ್ಲ ಹೇಳ್ತಾರೋ ಗೊತ್ತಿಲ್ಲ, ಸಿಎಂ ಇಬ್ರಾಹಿಂ ಸಾಹೇಬ್ರು ಅಧ್ಯಕ್ಷರಾಗಿರ್ತಾರೆ ಎಂದರು.

Related Articles

- Advertisement -

Latest Articles