ಹಾಸನ : ಸಾಮಾನ್ಯ ಕಾರ್ಯಕರ್ತನಿಗೆ ಟಿಕೆಟ್ ನೀಡಲಾಗುವುದು ಎಂದು ಹೆಚ್ ಡಿಕೆ ಹೇಳಿದ್ದಾರೆ, ಸಾಮಾನ್ಯ ಕಾರ್ಯಕರ್ತ ಅಂದ್ರೆ ಯಾರು ? ಎಂದು ರೇವಣ್ಣ ಪ್ರಶ್ನಿಸಿದ್ದಾರೆ.
ಮಾಧ್ಯಮದವರೊಂದಿಗೆ ಮಾತನಾಡಿ, ಪಕ್ಷದಿಂದ ಯಾವ ಫಲವನ್ನೂ ಪಡೆಯದವನು ಸಾಮಾನ್ಯ ಕಾರ್ಯಕರ್ತ, ಹೆಚ್ ಡಿ ದೇವೇಗೌಡರಿಗೆ ಹಾಸನದ ಬಗ್ಗೆ ಎಲ್ಲವೂ ಗೊತ್ತು, ಅವರು ಹೇಳಿದಂತೆ ನಾವು ಕೇಳುತ್ತೇವೆ, ಕುಮಾರಸ್ವಾಮಿ ಮುಖ್ಯಮಂತ್ರಿ ಆಗಬೇಕೆಂಬುದೇ ನಮ್ಮ ಉದ್ದೇಶ. ಸಾಮಾನ್ಯ ಕಾರ್ಯಕರ್ತ ಯಾರು ಎಂಬುದನ್ನು ದೇವೇಗೌಡರು ತೀರ್ಮಾನಿಸುತ್ತಾರೆ ಎಂದರು.
ಎರಡು ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡುವ ವಿಚಾರವಾಗಿ ಪ್ರತಿಕ್ರಿಯಿಸಿ, ನಾನು ಯಾಕೆ 2 ಕ್ಷೇತ್ರಗಳಲ್ಲಿ ಸ್ಪರ್ಧಿಸಲಿ. ನನ್ನ ಕ್ಷೇತ್ರ ಹೊಳೆನರಸೀಪುರ, ಆ ಜನ ನನ್ನನ್ನು 30 ವರ್ಷ ಸಾಕಿದ್ದಾರೆ ಎಂದು ಹೇಳಿದ್ದಾರೆ. ಹೆಚ್ ಡಿ ದೇವೇಗೌಡರಿಗೆ ಅರವತ್ತು ವರ್ಷಗಳ ಅನುಭವ ಇದೆ. ಸೋಲು ಗೆಲುವು ಎರಡನ್ನೂ ಕಂಡಿದ್ದಾರೆ. ದೇವೇಗೌಡರ ತೀರ್ಮಾನವೇ ಅಂತಿಮ, ಹಾಸನ ಜಿಲ್ಲೆಯ 7 ವಿಧಾನಸಭಾ ಕ್ಷೇತ್ರಗಳಲ್ಲೂ ಜೆಡಿಎಸ್ ಗೆಲ್ಲಬೇಕು ಅನ್ನೋದೇ ನಮ್ಮ ಉದ್ದೇಶ ಎಂದು ಅಭಿಪ್ರಾಯಪಟ್ಟರು.