Sunday, March 26, 2023
spot_img
- Advertisement -spot_img

ಜನಾರ್ದನ ರೆಡ್ಡಿ ಮತ್ತೆ ಬಿಜೆಪಿ ಸೇರ್ತಾರ? ಹೊಸ ರಾಜಕೀಯ ಪಕ್ಷ ಕಟ್ತಾರಾ ?

ಬೆಂಗಳೂರು: ವಿಧಾನಸಭೆ ಚುನಾವಣೆ ಇನ್ನೇನು ಐದು ತಿಂಗಳು ಇರುವಾಗಲೇ ರೆಡ್ಡಿ ರಾಜಕೀಯ ನಡೆ ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ.

ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ಮನೆ ಮಾಡಿದ್ದು ವಿಧಾನಸಭೆ ಚುನಾವಣೆ ಹೊತ್ತಲ್ಲಿ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ನಡೆ ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ. ಆದ್ರೆ, ಗಣಿಧಣಿ ಜನಾರ್ದನ ರೆಡ್ಡಿ ಮತ್ತೆ ಬಿಜೆಪಿ ಸೇರಲಿದ್ದಾರಾ? ಅಥವಾ ಹೊಸ ರಾಜಕೀಯ ಪಕ್ಷ ಆರಂಭಿಸಲಿದ್ದಾರಾ? ಅನ್ನೋದು ಸದ್ಯದ ಕುತೂಹಲ.

ಡಿಸೆಂಬರ್ 25ರಂದು ಬೆಂಗಳೂರಿನ ಪಾರಿಜಾತ ಅಪಾರ್ಟ್​ಮೆಂಟ್​ನಲ್ಲಿ ರೆಡ್ಡಿ ಸುದ್ದಿಗೋಷ್ಠಿ ಕರೆದಿದ್ದು, ತಮ್ಮ ರಾಜಕೀಯ ನಿಲುವು ಬಗ್ಗೆ ಮಹತ್ವದ ಘೋಷಣೆ ಮಾಡುವ ಸಾಧ್ಯತೆಗಳಿವೆ. ಮತ್ತೊಂದೆಡೆ ಹೊಸ ಪಕ್ಷ ಘೋಷಣೆ ಮಾಡ್ತಾರಾ ಎನ್ನುವ ಕುತೂಹಲ ಮೂಡಿಸಿದೆ. ಇನ್ನು ಮುಖ್ಯವಾಗಿ ಮುಂದಿನ ಚುನಾವಣೆಯಲ್ಲಿ ತಾವು ಸ್ಪರ್ಧೆ ಮಾಡುವ ಕ್ಷೇತ್ರವನ್ನು ಸಹ ಘೋಷಣೆ ಮಾಡುತ್ತಾರಾ ಎನ್ನುವ ಕುತೂಹಲ ಸೃಷ್ಟಿಯಾಗಿದೆ.

ಡಿಸೆಂಬರ್ 25ರಂದು ಸುದ್ದಿಗೋಷ್ಠಿಗೂ ಮುನ್ನ ರೆಡ್ಡಿ ಅವರು ವಿವಿಧ ಮಠಗಳಿಗೆ ಭೇಟಿ ನೀಡಲಿದ್ದಾರೆ. ಮಠಗಳು ಹಾಗೂ ಪ್ರಮುಖ ಮುಖಂಡರನ್ನು ಭೇಟಿ ಮಾಡಿ ಚರ್ಚಿಸಲಿದ್ದಾರೆ. ನಾಳೆಯಿಂದ (ಡಿ.19) ಜನಾರ್ದನ ರೆಡ್ಡಿ ತುಮಕೂರು ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಲಿದ್ದು, ಡಿ. 20ರಂದು ಗದಗಿನ ಪುಟ್ಟರಾಜ ಗವಾಯಿಗಳ ಗದ್ದುಗೆ ದರ್ಶನ ಪಡೆಯಲಿದ್ದಾರೆ. ಆದರೆ ಇದೀಗ ರೆಡ್ಡಿಯವರ ಮುಂದಿನ ನಡೆ ಏನು ಕುತೂಹಲಕಾರಿಯಾಗಿದೆ.

Related Articles

- Advertisement -

Latest Articles