ಬೆಂಗಳೂರು: ರಾಜ್ಯದಲ್ಲಿ ಘರ್‌ವಾಪ್ಸಿ ಚರ್ಚೆ ಜೋರಾಗುತ್ತಿರುವ ನಡುವೆ ಮಾಜಿ ಸಚಿವ ಶಿವರಾಮ್ ಹೆಬ್ಬಾರ್ ನಿನ್ನೆ ಸಿಎಂ ಸಿದ್ದರಾಮಯ್ಯರ ಭೇಟಿಯಾಗಿ ಕುತೂಹಲ ಮೂಡಿಸಿದ್ದಾರೆ. ಕ್ಷೇತ್ರದ ಅಭಿವೃದ್ಧಿ ವಿಚಾರವಾಗಿ ಭೇಟಿಯಾಗುತ್ತಿದ್ದೇವೆ ಎನ್ನುತ್ತಲೇ ಘರ್‌ವಾಪ್ಸಿಗೆ ಮುಹೂರ್ತ ಇಡುತ್ತಿದ್ದಾರಾ ಎಂಬ ಅನುಮಾನಕ್ಕೆ ಕಾರಣವಾಗುತ್ತಿದೆ.
ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಟಿಕೆಟ್ ಪಡೆದು ತಮ್ಮ ಕ್ಷೇತ್ರ ಪುತ್ರನಿಗೆ ಬಿಟ್ಟುಕೊಡುವ ಪ್ಲಾನ್ ಮಾಡಿದ್ದಾರೆ ಎನ್ನಲಾಗಿದೆ. ಹೀಗಾಗಿ ಪುತ್ರನಿಗೆ ಕಾಂಗ್ರೆಸ್ ಟಿಕೆಟ್ ನೀಡುವುದು ಖಚಿತವಾದರೆ ಕಾಂಗ್ರೆಸ್ ಸೇರಲು ಸಿದ್ಧತೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ. ಕಾಂಗ್ರೆಸ್ ಗ್ರೀನ್ ಸಿಗ್ನಲ್ ಕೊಟ್ಟರೆ ಮುಂದಿನ ಹೆಜ್ಜೆ ಇಡಲು ಸಜ್ಜಾಗಿದ್ದಾರೆ.
ಇದನ್ನೂ ಓದಿ: ಡಿ.ಕೆ ಶಿವಕುಮಾರ್ ನೇತೃತ್ವದ ಕಾರ್ಯಕ್ರಮಕ್ಕೆ ಎಸ್.ಟಿ ಸೋಮಶೇಖರ್ ಅಧ್ಯಕ್ಷತೆ!
ಆದರೆ ಉತ್ತರ ಕನ್ನಡ ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ಟಿಕೆಟ್‌ಗಾಗಿ ಭಾರೀ ಸ್ಪರ್ಧೆ ಕಂಡುಬರುತ್ತಿದೆ. ಆರ್.ವಿ.ದೇಶಪಾಂಡೆ ಪುತ್ರ ಪ್ರಶಾಂತ್ ದೇಶಪಾಂಡೆ ಹಾಗೂ ಮಾರ್ಗರೇಟ್ ಆಳ್ವಾ ಪುತ್ರ ನೀವೆದಿತ್ ಆಳ್ವಾ ಕೂಡ ಈ ರೇಸ್‌ನಲ್ಲಿದ್ದಾರೆ. ಹೀಗಾಗಿ ಘಟಾನುಘಟಿ ನಾಯಕರ ನಡುವೆ ಟಿಕೆಟ್ ಹೋರಾಟಕ್ಕಿಳಿದು ಕಾದು ನೋಡುವ ತಂತ್ರ ಪ್ರಯೋಗಿಸಿದ್ದಾರೆ ಎನ್ನಲಾಗ್ತಿದೆ.
ಇತ್ತ ಮಾಜಿ ಸಚಿವ ಎಸ್.ಟಿ ಸೋಮಶೇಖರ್ ಸಹ ಕಾಂಗ್ರೆಸ್ ನಾಯಕರ ಭೇಟಿಯಾಗಿದ್ದು, ಮಾತ್ರವಲ್ಲ ಕಾಂಗ್ರೆಸ್ ನಾಯಕರ ಕಾರ್ಯಕ್ರಮದಲ್ಲೂ ಭಾಗಿಯಾಗಲಿದ್ದಾರೆ. ಹೀಗಾಗಿ ಘರ್‌ವಾಪ್ಸಿ ಚರ್ಚೆಗೆ ಮತ್ತಷ್ಟು ಪುಷ್ಠಿ ಸಿಕ್ಕಂತಾಗಿದೆ.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.