ನವದೆಹಲಿ: ಕರ್ನಾಟಕದ ಎಲೆಕ್ಷನ್ ಸಮೀಪದಲ್ಲಿರುವಾಗಲೇ ಕುಟುಂಬ ರಾಜಕೀಯಕ್ಕೆ ಅವಕಾಶ ಇಲ್ಲ ಎಂದು ಹೈಕಮಾಂಡ್ ಕಟ್ಟುನಿಟ್ಟಾಗಿ ಸೂಚಿಸಿದೆ, ಅಭ್ಯರ್ಥಿಗಳ ಟಿಕೆಟ್ ಪಟ್ಟಿ ಘೋಷಣೆಗೆ ಕಾಯುತ್ತಿದ್ದ ಬಿಜೆಪಿ ನಾಯಕರಿಗೆ ಚಿಂತೆ ಶುರುವಾಗಿತ್ತು. ನಮಗೆ ಟಿಕೆಟ್ ಸಿಗುತ್ತಾ ಇಲ್ವಾ ಎಂದು ಚಿಂತೆಯಲ್ಲಿದ್ದ ನಾಯಕರಿಗೆ ಪ್ರಧಾನಿ ಮೋದಿ ಶಾಕ್ ಕೊಟ್ಟಿದ್ದಾರೆ.
ಈ ಬೆನ್ನಲ್ಲೇ ಸಚಿವ ಸೋಮಣ್ಣ ಪುತ್ರ ಅರುಣ್ಗೆ ಟಿಕೆಟ್ ನೀಡಬೇಕು ಎನ್ನುತ್ತಿರುವ ಸೋಮಣ್ಣರಿಗೆ ಚುನಾವಣಾ ನಿವೃತ್ತಿ ಘೋಷಿಸಲು ಹೈಕಮಾಂಡ್ ಸೂಚಿಸಿದೆ ಎಂದು ಹೇಳಲಾಗುತ್ತಿದೆ. ಇತ್ತೀಚೆಗೆ ಉನ್ನತ ನಾಯಕರನ್ನು ಭೇಟಿಯಾಗಿದ್ದಾಗ ಚುನಾವಣೆಯಲ್ಲಿ ನೀವೇ ಸ್ಪರ್ಧಿಸಿದರೆ ಯಾವುದೇ ತೊಂದರೆ ಇಲ್ಲ. ಪುತ್ರನಿಗೆ ಟಿಕೆಟ್ ಬೇಕಾದರೆ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಬೇಕು. ಒಂದೇ ಕುಟುಂಬಕ್ಕೆ ಎರಡು ಟಿಕೆಟ್ ಇಲ್ಲ ಎಂದು ಹೇಳಿದೆ ಎನ್ನಲಾಗುತ್ತಿದೆ.
ಹೀಗಾಗಿ ಸೋಮಣ್ಣರ ಮುಂದಿನ ನಡೆ ಏನು? ಪುತ್ರನಿಗಾಗಿ ಚುನಾವಣಾ ರಾಜಕೀಯದಿಂದ ಹಿಂದೆ ಸರಿಯಲಿದ್ದಾರಾ , ಚುನಾವಣೆಗೆ ಅವರೇ ಸ್ಪರ್ಧಿಸ್ತಾರ ಅನ್ನೋದು ಕುತೂಹಲಕಾರಿಯಾಗಿದೆ.ಇತ್ತೀಚೆಗಷ್ಟೇ ಸಚಿವ ಸ್ಥಾನಕ್ಕಾಗಿ ಪಟ್ಟುಹಿಡಿದಿದ್ದ ಕೆ ಎಸ್ ಈಶ್ವರಪ್ಪ ಚುನಾವಣಾ ರಾಜಕೀಯಕ್ಕೆ ರಾಜೀನಾಮೆ ನೀಡಿದ್ದಾರೆ.