ಬೆಂಗಳೂರು: ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ವಿರುದ್ಧ ಜಾರಿ ನಿರ್ದೇಶನಾಲಯ (ಇ.ಡಿ) ದಾಖಲಿಸಿರುವ ಆದಾಯ ಮೀರಿದ ಆಸ್ತಿ ಗಳಿಕೆ ಪ್ರಕರಣದ ತನಿಖೆಯನ್ನು ಕೈಬಿಡುವಂತೆ ಕೋರಿದ್ದ ಅರ್ಜಿ ವಿಚಾರಣೆ ಮುಂದೂಡಲಾಗಿದೆ. ಇಂದು ದೆಹಲಿ ಹೈಕೋರ್ಟ್‌ನ ದ್ವಿಸದಸ್ಯ ಪೀಠ ವಿಚಾರಣೆ ನಡೆಸಿದ್ದು, ಬಳಿಕ ವಿಚಾರಣೆಯನ್ನು ಮುಂದೂಡಿ ಆದೇಶಿಸಿದೆ.
2019ರಿಂದ ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ಇಡಿ ವಿಚಾರಣೆ ನಡೆಸುತ್ತಿದೆ. ತಮ್ಮ ವಿರುದ್ಧ ಇಡಿ ತನಿಖೆಗೆ ತಡೆ ನೀಡಬೇಕು ಎಂದು ಡಿ.ಕೆ ಶಿವಕುಮಾರ್ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ಸಂಬಂಧ ಇಂದು ನ್ಯಾ. ಅನೀಶ್ ದಯಾಳ್ ನೇತೃತ್ವದ ದ್ವಿಸದಸ್ಯ ಪೀಠ ವಿಚಾರಣೆ ಕೈಗೆತ್ತಿಕೊಂಡಿತ್ತು.
ಇದನ್ನೂ ಓದಿ: ʼಶಿವಮೊಗ್ಗದಲ್ಲಿ ಅಭಿವೃದ್ಧಿಯ ವಿನೂತನ ಅಧ್ಯಾಯ ಆರಂಭವಾಗಿದೆ ́
ವಿಚಾರಣೆ ವೇಳೆ ಇಡಿ ಪರ ವಕೀಲರು ದಾಖಲೆಗಳನ್ನು ನೀಡಲು ಮತ್ತಷ್ಟು ಸಮಯಾವಕಾಶ ಕೇಳಿದ್ದಾರೆ ಎಂದು ತಿಳಿದುಬಂದಿದೆ. ಹೀಗಾಗಿ ಕೋರ್ಟ್ ಅರ್ಜಿ ವಿಚಾರಣೆ ಮುಂದೂಡಿದೆ.
ಡಿಕೆಶಿ ವಿರುದ್ಧ ದಾಖಲಿಸಿರುವ ಎಲ್ಲಾ ಪ್ರಕರಣಗಳ ವಿಚಾರಣೆಯನ್ನು ಸೆ. 2ರಿಂದ ಹೈಕೋರ್ಟ್ ಕೈಗೆತ್ತಿಗೊಳ್ಳಲಿದೆ. ಇದೇ ವರ್ಷ ಮೇ 18ರಂದೇ ದೆಹಲಿ ನ್ಯಾಯಾಲಯವು , ಡಿಕೆಶಿ ಹಾಗೂ ಕರ್ನಾಟಕದ ವಸತಿ ಸಚಿವ ಜಮೀರ್ ಅಹ್ಮದ್ ವಿರುದ್ಧ ಇ.ಡಿ ದಾಖಲಿಸಿದ್ದ ಪ್ರಕರಣಗಳನ್ನು ಒಟ್ಟಿಗೆ ವಿಚಾರಣೆ ನಡೆಸುವುದಾಗಿ ತಿಳಿಸಿತ್ತು.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.