ಕಾಸರಗೋಡು : ಕನ್ನಡ ಶಾಲೆಗೆ ಮಲಯಾಳ ಶಿಕ್ಷಕರನ್ನು ನೇಮಿಸಿದ್ದ ಕಾರಣ ಪೋಷಕರು ನಡೆಸಿದ್ದ ಪ್ರತಿಭಟನೆಗೆ ಕೊನೆಗೂ ಜಯ ಸಿಕ್ಕಿದೆ. ಕನ್ನಡ ಶಾಲೆಗೆ ಮಲಯಾಳಂ ಶಿಕ್ಷಕಿಯನ್ನು ನೇಮಿಸಿದ್ದ ಕೇರಳ ಸರ್ಕಾರಕ್ಕೆ ಕೇರಳ ಹೈಕೋರ್ಟ್ ತಪರಾಕಿ ಹಾಕಿದ್ದು, ಕನ್ನಡ ತಿಳಿದ ಶಿಕ್ಷಕರನ್ನೇ ನೇಮಿಸುವಂತೆ ಆದೇಶಿಸಿದೆ.
ಕರ್ನಾಟಕದ ಗಡಿಭಾಗ ಕೇರಳದ ಕಾಸರಗೋಡು ಜಿಲ್ಲೆಯ ಅಡೂರು ಸರ್ಕಾರಿ ಪ್ರಾಥಮಿಕ ಶಾಲೆಗೆ ಕೇರಳ ಸರ್ಕಾರ ಕನ್ನಡ ತಿಳಿಯದ ಮಲಯಾಳಿ ಶಿಕ್ಷಕಿಯನ್ನು ನೇಮಿಸಿತ್ತು. ಇದರಿಂದ ಸಮಸ್ಯೆಗೀಡಾದ ವಿದ್ಯಾರ್ಥಿಗಳು, ಪೋಷಕರು ಪ್ರತಿಭಟನೆ ನಡೆಸಿದ್ದು, ಎರಡು ತಿಂಗಳಿನಿಂದ ಕೋರ್ಟ್ ಹೋರಾಟ ನಡೆಸಿದ್ದರು.
ಆಕೆಗೆ ಕನ್ನಡ ಬರೋದಿಲ್ಲ, ಮಕ್ಕಳಿಗೆ ಪಾಠ ಅರ್ಥವಾಗುತ್ತಿಲ್ಲ, ತುಂಬಾ ಕಷ್ಟವಾಗುತ್ತಿದೆ ಎಂದು ಎರಡು ತಿಂಗಳಿನಿಂದ ಪ್ರತಿಭಟನೆ ನಡೆಸಿ ಪೋಷಕರು ಹೋರಾಟ ನಡೆಸಿದ್ದರು.
ಇದನ್ನೂ ಓದಿ: ನಾಳೆ ನಡೆಯಬೇಕಿದ್ದ ಪ್ರಧಾನಿ ಮೋದಿ ರೋಡ್ ಶೋ ರದ್ದು!
ಇದೇ ವಿಚಾರವಾಗಿ ಕೇರಳ ಸರ್ಕಾರ, ಶಿಕ್ಷಣ ಇಲಾಖೆಗೆ ಉಚ್ಛ ನ್ಯಾಯಾಲಯ ಚಾಟಿ ಬೀಸಿತ್ತು. ತಕ್ಷಣವೇ ಕನ್ನಡ ಬಲ್ಲ ಶಿಕ್ಷಕರ ನೇಮಿಸುವಂತೆ ಕೇರಳ ಸರ್ಕಾರಕ್ಕೆ ಆದೇಶ ಹೊರಡಿಸಿತ್ತು. ಕನ್ನಡ ಮಕ್ಕಳಿಗೆ ಮಲಯಾಳಿ ಶಿಕ್ಷಕಿ ನೇಮಿಸಿ ಅನ್ಯಾಯ ಮಾಡಿದೆ ಎಂದು ಪೋಷಕರ ಕಡೆಯ ವಾದವನ್ನು ಕೇರಳ ಹೈಕೋರ್ಟ್ ಪುರಸ್ಕರಿಸಿದೆ.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.