‘ಕೈ’ ಶಾಸಕ ವೀರೇಂದ್ರ ಪಪ್ಪಿಗೆ ಹೈಕೋರ್ಟ್‌ನಿಂದ​ ಬಿಗ್‌ಶಾಕ್..!

ಬೆಂಗಳೂರು : ಶಾಸಕ ವೀರೇಂದ್ರ ಪಪ್ಪಿಗೆ ಹೈಕೋರ್ಟ್​ ಬಿಗ್‌ಶಾಕ್ ಕೊಟ್ಟಿದೆ. ಅಕ್ರಮ ಬೆಟ್ಟಿಂಗ್ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿಯನ್ನು ಬಂಧಿಸಿರುವ ಇಡಿ ಕ್ರಮ ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ಇದೀಗ ಹೈಕೋರ್ಟ್ ವಜಾಗೊಳಿಸಿದೆ.

ವೀರೇಂದ್ರ ಬಂಧನವನ್ನು ಕಾನೂನುಬಾಹಿರವೆಂದು ಘೋಷಿಸಿ, ತಕ್ಷಣವೇ ಬಿಡುಗಡೆಗೊಳಿಸಲು ಆದೇಶಿಸುವಂತೆ ಕೋರಿ ವೀರೇಂದ್ರ ಪತ್ನಿ ಆರ್.ಡಿ.ಚೈತ್ರಾ ಸಲ್ಲಿಸಿದ್ದ ರಿಟ್ ಅರ್ಜಿ ವಿಚಾರಣೆ ಪೂರ್ಣಗೊಳಿಸಿ, ಕಾಯ್ದಿರಿಸಿದ್ದ ತೀರ್ಪನ್ನು ನ್ಯಾಯಮೂರ್ತಿ ಎಂ.ಐ. ಅರುಣ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಇಂದು ಪ್ರಕಟಿಸಿದೆ. ವೀರೇಂದ್ರ ಪಪ್ಪಿ ಬಂಧನ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ನಿರಾಕರಿಸಿದೆ.

ಶಾಸಕ ಕೆ.ಸಿ.ವೀರೇಂದ್ರ ಬಂಧನವನ್ನು ಕಾನೂನು ಬಾಹಿರವೆಂದು ಘೋಷಿಸಲು ನಿರಾಕರಿಸಿರುವ ಹೈಕೋರ್ಟ್, ಅಕ್ರಮ ಹಣ ವರ್ಗಾವಣೆ ತಡೆ (ಪಿಎಂಎಲ್) ಕಾಯ್ದೆಯ ಸೆಕ್ಷನ್ 2(1)(ಯು) ತಿದ್ದುಪಡಿ ಮಾಡಿರುವುದು ಜಾರಿ ನಿರ್ದೇಶನಾಲಯದ ನೆರವಿಗೆ ಬಂದಿದೆ. ಕನಕಪುರದ ಹಾರೋಹಳ್ಳಿ ಠಾಣೆಯಲ್ಲಿ ಬಾಕಿ ಇರುವ ಪ್ರಕರಣವನ್ನು ಆಧರಿಸಿ ಈಡಿ ತನಿಖೆ ಮುಂದುವರಿಯಲು ತಿದ್ದುಪಡಿ ಕಾಯ್ದೆ ಅವಕಾಶ ಕಲ್ಪಿಸುತ್ತದೆ ಎಂದು ಹೇಳಿದೆ.

Leave a Reply

Your email address will not be published. Required fields are marked *