ಆರ್‌ಎಸ್‌ಎಸ್‌ ಕಾರ್ಯಕರ್ತನಿಗೆ ಮಹತ್ವದ ಹುದ್ದೆ, ಸಿದ್ದರಾಮಯ್ಯ ವಿರುದ್ಧ ಸಿಡಿದೆದ್ದ ಕೈ ಕಾರ್ಯಕರ್ತರು

ಬೆಂಗಳೂರು : ಆರ್‌ಎಸ್‌ಎಸ್‌ಗೆ ಕಡಿವಾಣ ಹಾಕುವ ವಿಚಾರವಾಗಿ ಕಾಂಗ್ರೆಸ್‌ ನಾಯಕರು ಬಿಜೆಪಿ ನಾಯಕರ ತಿಕ್ಕಾಟದ ನಡುವೆಯೇ ಇದೀಗ ಆರ್​​ಎಸ್​ಎಸ್​ ಕಾರ್ಯಕರ್ತರೊಬ್ಬರನ್ನ ಯಶಸ್ವಿನಿ ಸಹಕಾರಿ ಸದಸ್ಯರ ಆರೋಗ್ಯ ರಕ್ಷಣಾ ಟ್ರಸ್ಟ್​​​ಗೆ ಸದಸ್ಯರನ್ನಾಗಿ ನೇಮಕ ಮಾಡಿಲಾಗಿದೆ. ಸರ್ಕಾರಕ ಈ ನಡೆ ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶಕ್ಕೆ ಕಾರಣವಾಗಿದೆ.

ತಿಪಟೂರಿನ ಆರ್‌ಎಸ್‌ಎಸ್‌ ಸದಸ್ಯ ಡಾ.ಶ್ರೀಧರ್ ಕುಮಾರ್‌ ಅವರನ್ನು ಯಶಸ್ವಿನಿ ಸಹಕಾರಿ ಸದಸ್ಯರ ಆರೋಗ್ಯ ರಕ್ಷಣಾ ಟ್ರಸ್ಟ್ ಸದಸ್ಯರನ್ನಾಗಿ ಸರ್ಕಾರ ನೇಮಕ ಮಾಡಲಾಗಿದೆ. ಕೆ.ಎನ್.ರಾಜಣ್ಣ ರಾಜೀನಾಮೆ ಬಳಿಕ ಸಹಕಾರ ಇಲಾಖೆ ಸಿಎಂ ಸಿದ್ದರಾಮಯ್ಯ ಬಳಿಯೇ ಇದೆ. ಇದೀಗ ಅವರೇ ನೇಮಕ ಮಾಡಿದ್ದಾರೆ ಎಂದು ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶ ಭುಗಿಲೆದ್ದಿದ್ದು, ಟ್ರಸ್ಟ್​​ನ ಮಹಾಪೋಷಕರಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೂಡಲೇ ಟ್ರಸ್ಟ್ ಸದಸ್ಯತ್ವ ವಾಪಸ್ ಪಡೆಯುಂತೆ ಆಗ್ರಹಿಸಿದ್ದಾರೆ.

ಕರ್ನಾಟಕದ ಕೆಲವು ರಾಜ್ಯ ಸರ್ಕಾರಿ ನೌಕರರು ರಾಷ್ಟ್ರೀಯ ಸ್ವಯಂಸೇವಕ ಸಂಘದ ಪಥಸಂಚಲನದಲ್ಲಿ ಭಾಗವಹಿಸಿರುವ ವಿಷಯವು ರಾಜ್ಯ ಸರ್ಕಾರದ ಸಂಪುಟದಲ್ಲಿ ಬಿರುಸಿನ ಚರ್ಚೆಗೆ ಕಾರಣವಾಗಿದ್ದು, ಇದೀಗ ಆರ್​ಎಸ್​ಎಸ್​ ಹೆಸರು ಉಲ್ಲೇಖಿಸದೇ ನಿಯಮ ಜಾರಿ ಮಾಡಿದೆ. ಇದರ ಬೆನ್ನಲ್ಲೇ ಆರ್​ಎಸ್​ಎಸ್​ ಪಥಸಂಚಲನದಲ್ಲಿ ಭಾಗಿಯಾಗಿದ್ದ ಸರ್ಕಾರಿ ಹಾಗೂ ಗುತ್ತಿಗೆ ನೌಕರರನ್ನು ಸಸ್ಪೆಂಡ್ ಮಾಡಲಾಗಿದ್ದು, ಆಡಳಿತರೂಢ ಕಾಂಗ್ರೆಸ್ ಹಾಗೂ ವಿಪಕ್ಷ ಬಿಜೆಪಿ ನಾಯಕರ ನಡುವಿನ ಕಿತ್ತಾಟ ತಾರಕಕ್ಕೇರಿದೆ. ಈ ಎಲ್ಲಾ ಬೆಳವಣಿಗಳ ನಡುವೆ ಸರ್ಕಾರದ ಈ ನೇಮಕ ರಾಜ್ಯದ ರಾಜಕೀಯದಲ್ಲಿ ಹೊಸ ಚರ್ಚೆಗೆ ಎಡೆಮಾಡಿಕೊಟ್ಟಿದೆ.

ಪ್ರಿಯಾಂಕ್ ಖರ್ಗೆ ಪತ್ರ ಬರೆದ ಬೆನ್ನಲ್ಲೇ ಸರ್ಕಾರ, ಆರ್‌ಎಸ್‌ಎಸ್‌ಗೆ ಪರೋಕ್ಷವಾಗಿ ಅಂಕುಶ ಹೇರಿದೆ. ಸರ್ಕಾರ ಈ ನಿಯಮವನ್ನು ಆರ್​ಎಸ್​ಎಸ್​ ಸೇರಿ ಸಾಮಾನ್ಯವಾಗಿ ಎಲ್ಲ ಸಂಘಟನೆಗಳಿಗೆ ಅನ್ವಯವಾಗುವಂತೆ ರೂಪಿಸಿದೆ. ಈ ಮೂಲಕ ಇದರಿಂದ ರಾಜಕೀಯ ವಿವಾದವನ್ನು ತಪ್ಪಿಸಲು ಸರ್ಕಾರ ಎಚ್ಚರಿಕೆ ವಹಿಸಿದೆ. ಸರ್ಕಾರಿ ಆಸ್ತಿಗಳನ್ನು ಇತರೆ ಕಾರ್ಯಕ್ರಮಗಳಿಗೆ ದುರುಪಯೋಗವನ್ನು ತಡೆಯುವುದು ಸರ್ಕಾರದ ಜವಾಬ್ದಾರಿ ಎಂದು ಸುತ್ತೋಲೆಯಲ್ಲಿ ಇದ್ದರೂ ಸಹ ಈ ನಿಯಮ ಆರ್​ಎಸ್​ಎಸ್​​ ಚಟುವಟಿಕೆ ಬ್ಯಾನ್​ ಮಾಡುವ ಆದೇಶದಂತಿದ್ದು, ಇದು ಮತ್ತಷ್ಟು ರಾಜಕೀಯ ಕೆಸರೆರಚಾಟಕ್ಕೆ ಕಾರಣವಾಗಿದೆ.

Leave a Reply

Your email address will not be published. Required fields are marked *