ಹಿಮಾಚಲ ಪ್ರದೇಶ: ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಜಯ ಗಳಿಸಿದ್ದು, ಮುಂದಿನ ಸಿಎಂ ಯಾರು ಎಂಬುದು ಮುಂದಿನ ಸವಾಲಾಗಿದೆ. ಅಂದಹಾಗೆ, ಮುಂದಿನ ಮುಖ್ಯಮಂತ್ರಿ ಯಾರೆಂದು ನಿರ್ಧರಿಸಲು ಹಿಮಾಚಲ ಕಾಂಗ್ರೆಸ್ ಶಾಸಕರ ಸಭೆ ನಡೆಯಲಿದೆ. ಮುಖ್ಯಮಂತ್ರಿ ರೇಸ್‌ನಲ್ಲಿ ಪ್ರಭಾವಿ ಪ್ರತಿಭಾ ಸಿಂಗ್ ಸಿಎಂ ರೇಸ್‌ನಲ್ಲಿ ಹಲವು ಪ್ರಮುಖರ ಹೆಸರುಗಳು ಕೇಳಿಬಂದಿವೆ.
ಕಾಂಗ್ರೆಸ್‌ನ ಹಿಮಾಚಲ ಪ್ರದೇಶ ಅಧ್ಯಕ್ಷೆ ಪ್ರತಿಭಾ ಸಿಂಗ್ ಹೆಸರು ಪ್ರಮುಖರ ಪಟ್ಟಿಯಲ್ಲಿ ಮೊದಲನೆಯದು. ಕಳೆದ ವರ್ಷ ಮೃತಪಟ್ಟ ಕಾಂಗ್ರೆಸ್‌ನ ಪ್ರಭಾವಿ ನಾಯಕರಾಗಿದ್ದ ವೀರಭದ್ರ ಸಿಂಗ್ ಅವರ ಪತ್ನಿ ಪ್ರತಿಭಾ ಸಿಂಗ್. ಪ್ರತಿಭಾ ಸಿಂಗ್ ಮಂಡಿ ಲೋಕಸಭಾ ಸಂಸದರಾಗಿದ್ದಾರೆ. ಅವರು ರಾಜಕೀಯ ಕುಟುಂಬಕ್ಕೆ ಸೇರಿದವರು. ಈ ಬಾರಿಯ ಚುನಾವಣೆಯಲ್ಲಿ ಸ್ಪರ್ಧಿಸಲಿಲ್ಲವಾದರೂ, ಕಾಂಗ್ರೆಸ್ ಪ್ರಚಾರವನ್ನು ಸಮರ್ಥವಾಗಿ ಮುನ್ನಡೆಸಿದರು ಕಾಂಗ್ರೆಸ್ ರಾಜ್ಯ ಘಟಕದ ಮಾಜಿ ಅಧ್ಯಕ್ಷ ಸುಖವಿಂದರ್ ಸಿಂಗ್ ಸುಖು ಸಿಎಂ ಸ್ಥಾನದ ಆಕಾಂಕ್ಷಿಯಾಗಿದ್ದಾರೆ.
ವಿಧಾನಸಭೆಯಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಮುಖೇಶ್ ಅಗ್ನಿಹೋತ್ರಿ ಮತ್ತು ಶಾಸಕ ಹರ್ಷವರ್ಧನ್ ಚೌಹಾಣ್ ಕೂಡ ಸಿಎಂ ರೇಸ್‌ನಲ್ಲಿ ಇದ್ದಾರೆ ಎಂದು ತಿಳಿದುಬಂದಿದೆ. ಈ ಕಾರಣದಿಂದಾಗಿ ಕಾಂಗ್ರೆಸ್ ಪಕ್ಷವು ‘ಆಪರೇಷನ್ ಕಮಲ’ದ ಭೀತಿಯಲ್ಲಿದೆ. ಬಿಜೆಪಿಯು ಹಲವು ರಾಜ್ಯಗಳಲ್ಲಿ ಆಪರೇಷನ್ ಕಮಲ ಮಾಡಿ ಸರ್ಕಾರಗಳನ್ನು ಕೆಡವಿತ್ತು. ಹಿಮಾಚಲದ ಒಟ್ಟು 68 ಕ್ಷೇತ್ರಗಳ ಪೈಕಿ 40 ಕ್ಷೇತ್ರಗಳನ್ನು ಕಾಂಗ್ರೆಸ್ ತನ್ನದಾಗಿಸಿಕೊಂಡಿದೆ. ಬಿಜೆಪಿಗೆ 25 ಸ್ಥಾನಗಳು ಲಭಿಸಿವೆ.