Wednesday, November 29, 2023
spot_img
- Advertisement -spot_img

ಬಿಜೆಪಿ ಟಿಕೆಟ್ ಕೊಡಿಸುವುದಾಗಿ ವಂಚನೆ : ಚೈತ್ರಾ ಕುಂದಾಪುರ ಪೊಲೀಸರ ವಶಕ್ಕೆ

ಉಡುಪಿ : ಉದ್ಯಮಿಗೆ ಎಂಎಲ್ಎ ಟಿಕೆಟ್ ಕೊಡಿಸುವುದಾಗಿ ಬಹುಕೋಟಿ ರೂಪಾಯಿ ವಂಚಿಸಿರುವ ಆರೋಪದ ಮೇಲೆ ಹಿಂದುತ್ವ ಸಂಘಟನೆಯ ಕಾರ್ಯಕರ್ತೆ ಚೈತ್ರಾ ಕುಂದಾಪುರ ಸೇರಿದಂತೆ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಉಡುಪಿ ಕೃಷ್ಣ ಮಠದ ಪಾರ್ಕಿಂಗ್ ಏರಿಯಾದಲ್ಲಿ ಮಿಂಚಿನ ಕಾರ್ಯಾಚರಣೆ ನಡೆಸಿದ ಬೆಂಗಳೂರು ಸಿಸಿಬಿ ಪೊಲೀಸರು, ಸಿನಿಮಿಯ ಶೈಲಿಯಲ್ಲಿ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.

ಸಮಾಜ ಸೇವಕರಾಗಿ ಗುರುತಿಸಿಕೊಂಡಿರುವ ಬಿಲ್ಲವ ನಾಯಕ, ಬೈಂದೂರಿನ ಉದ್ಯಮಿ ಗೋವಿಂದ ಬಾಬು ಪೂಜಾರಿ ಎಂಬವರು ಈ ಬಾರಿಯ ಚುನಾವಣೆಗೆ ಬಿಜೆಪಿಯಿಂದ ಟಿಕೆಟ್ ಆಕಾಂಕ್ಷಿಯಾಗಿದ್ದರು. ಅವರ ಮುಗ್ಧತೆಯನ್ನು ಬಳಸಿಕೊಂಡ ಚೈತ್ರಾ, ನಾಲ್ಕೈದು ಜನರ ತಂಡದ ಮೂಲಕ ನಕಲಿ ಆರೆಸ್ಸೆಸ್ ನಾಯಕರನ್ನು ಸೃಷ್ಟಿ ಮಾಡಿ ಟಿಕೆಟ್ ಕೊಡಿಸುವುದಾಗಿ ನಂಬಿಸಿ ಮೂರು ಹಂತಗಳಲ್ಲಿ ಏಳು ಕೋಟಿ ರೂಪಾಯಿ ಹಣ ಪೀಕಿಸಿದ್ದಾಳೆ ಎಂದು ಆರೋಪಿಸಲಾಗಿದೆ.

ಇದನ್ನೂ ಓದಿ : ಧಮ್ ಇದ್ರೆ, ತಾಕತ್ ಇದ್ರೆ ಹರಿಪ್ರಸಾದ್‌ರನ್ನು ಡಿಕೆಶಿ ಉಚ್ಚಾಟಿಸಲಿ :‌ ಶಾಸಕ ಯತ್ನಾಳ್

ಬೈಂದೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ನಂಬಿಸಿ ಹಣ ಪಡೆದು ವಂಚಿಸಿದ ಆರೋಪ ಚೈತ್ರಾ ಮತ್ತು ಆಕೆಯ ತಂಡದ ಮೇಲೆ ಇದೆ. ಈ ಸಂಬಂಧ ವಂಚನೆಗೊಳಗಾದ ಉದ್ಯಮಿ ಗೋವಿಂದ ಬಾಬು ದೂರು ದಾಖಲಿಸಿದ್ದರು. ತನಿಖೆ ಕೈಗೊಂಡ ಪೊಲೀಸರು, ಆರಂಭದಲ್ಲಿ ಗಗನ್ ಕಡೂರು ಮತ್ತು ಪ್ರಸಾದ್ ಎಂಬವರನ್ನು ವಶಕ್ಕೆ ಪಡೆದಿದ್ದರು. ಚೈತ್ರಾ ಮತ್ತು ಶ್ರೀಕಾಂತ್ ನಾಯಕ್ ಪೆಲತ್ತೂರು ತಲೆ ಮರೆಸಿಕೊಂಡಿದ್ದರು. ನಿನ್ನೆ ಇಬ್ಬರನ್ನು ವಶಕ್ಕೆ ಪಡೆಯುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಪ್ರಕರಣದಲ್ಲಿ ಇದುವರೆಗೆ ನಾಲ್ವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ TwitterFacebook YoutubeInstagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Related Articles

- Advertisement -spot_img

Latest Articles