ರಾಜಸ್ಥಾನ : ಸನಾತನ ಧರ್ಮ ಸಮಾನತೆ ಮತ್ತು ಸಾಮಾಜಿಕ ನ್ಯಾಯಕ್ಕೆ ವಿರುದ್ಧವಾಗಿದೆ, ಅದನ್ನು ನಿರ್ಮೂಲನೆ ಮಾಡಬೇಕೆಂದು ಮಾತನಾಡಿರುವ ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಹೇಳಿಕೆಗೆ ಕೇಂದ್ರ ಗೃಹ ಸಚಿವ ಕಿಡಿಕಾರಿದ್ದಾರೆ.
ಇಲ್ಲಿನ ಡುಂಗಾಪುರದಲ್ಲಿ ಬಿಜೆಪಿ ಪಕ್ಷದಿಂದ ಹಮ್ಮಿಕೊಂಡಿದ್ದ ಪರಿವರ್ತನಾ ರ್‍ಯಾಲಿಯಲ್ಲಿ ಮಾತನಾಡಿದ ಅವರು ವಿರೋಧ ಪಕ್ಷದವರು ವೋಟ್ ಬ್ಯಾಂಕ್ ರಾಜಕಾರಣ ಮಾಡುತ್ತಿದ್ದಾರೆ ಎಂದೂ ಆರೋಪಿಸಿದರು.
ಸನಾತನ ಧರ್ಮವನ್ನು ನಿರ್ಮೂಲನೆ ಮಾಡಲು ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್ ಹಾಗೂ ಡಿಎಂಕೆ ಸರ್ಕಾರ ಹೊರಟಿದೆ. ಇದು ಖಂಡನೀಯವಾಗಿದ್ದು, ದೇಶದಲ್ಲಿ ಮೋದಿ ಸರ್ಕಾರ ಮತ್ತೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಸನಾತನ ಧರ್ಮ ಜನರ ಹೃದಯದಲ್ಲಿದೆ. ಸಂವಿಧಾನದ ಆಧಾರದಲ್ಲಿ ದೇಶ ಮುನ್ನಡೆಯಲಿದೆ. ದೇಶ ಮುನ್ನಡೆಸಲು ಮೋದಿ ಸರ್ಕಾರ ಸಜ್ಜಾಗಿದೆ ಎಂದರು.
ಇದನ್ನೂ ಓದಿ: ಲೋಕಸಭೆಗೆ ಸ್ಪರ್ಧೆ ಬಗ್ಗೆ ಸಮಯ ಬಂದಾಗ ತಿಳಿಸುವೆ: ತೇಜಸ್ವಿನಿ ಅನಂತಕುಮಾರ್
ಇನ್ನು ವಿರೋಧ ಪಕ್ಷಗಳ ‘ಇಂಡಿಯಾ’ ಮೈತ್ರಿಕೂಟದ ವಿರುದ್ಧ ಗುಡುಗಿದ ಅಮಿತ್ ಶಾ, ಈ ಹಿಂದೆ ಕಾಂಗ್ರೆಸ್ ಸರ್ಕಾರ ಅಯೋಧ್ಯ ರಾಮಮಂದಿರಕ್ಕೆ ತಡೆಯಾಜ್ಞೆ ನೀಡಿತ್ತು. ಆದರೆ ಈಗ ಬಿಜೆಪಿ ಸರ್ಕಾರದ ನೇತೃತ್ವದಲ್ಲಿ ಸುಪ್ರೀಂಕೋರ್ಟ್‌ನ ತೀರ್ಪಿನ ಅನ್ವಯ ರಾಮಮಂದಿರ ನಿರ್ಮಾಣವಾಗುತ್ತಿದೆ. ಇದನ್ನು ತಡೆಯಲು ಕಾಂಗ್ರೆಸ್‌ನಿಂದ ಸಾಧ್ಯವೇ ಇಲ್ಲ ಎಂದು ತಿರುಗೇಟು ನೀಡಿದರು.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.