ಬೆಳಗಾವಿ: ಜ. 27ರಿಂದ 29ರವರೆಗೆ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು, 27ರಂದು ನಡೆಯುವ ಕಾರ್ಯಕ್ರಮದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾಗವಹಿಸಲಿದ್ದಾರೆ’ ಎಂದು ಎಂದು ಕೆಎಲ್‌ಇ ತಾಂತ್ರಿಕ ವಿಶ್ವವಿದ್ಯಾಲಯದ ಕುಲಪತಿ ಡಾ. ಅಶೋಕ ಶೆಟ್ಟರ್ ತಿಳಿಸಿದರು.
ಮಾಧ್ಯಮದವರೊಂದಿಗೆ ಮಾತನಾಡಿ, ಬೆಳಗಾವಿಗೆ ಜ.27 ಹಾಗೂ 28ರಂದು ಎರಡು ದಿನ ಅಮಿತ್ ಶಾ ಧಾರವಾಡ, ಬೆಳಗಾವಿ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.ಜ.27ರಂದು ರಾತ್ರಿ ಹುಬ್ಬಳ್ಳಿಗೆ ಆಗಮಿಸುವ ಕೇಂದ್ರ ಗೃಹ ಸಚಿವ ಅಮಿತ್ ಶಾ, ಹುಬ್ಬಳ್ಳಿಯಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಜ.28ರ ಬೆಳಗ್ಗೆ 10 ಗಂಟೆಗೆ ಕುಂದಗೋಳಗೆ ತೆರಳಲಿದ್ದು, ಕುಂದಗೋಳದಲ್ಲಿ ಬಿಜೆಪಿ ವಿಜಯ ಸಂಕಲ್ಪ ಅಭಿಯಾನದಲ್ಲಿ ಭಾಗಿಯಾಗುತ್ತಾರೆ.
ಬಳಿಕ ಕೆಎಲ್‍ಇ ಸಂಸ್ಥೆಯ ಕಾರ್ಯಕ್ರಮದಲ್ಲಿ ಭಾಗಿಯಾಗಿ ಧಾರವಾಡಲ್ಲಿ ರಾಷ್ಟ್ರೀಯ ವಿಧಿವಿಜ್ಞಾನ ವಿಜ್ಞಾನ ಕೇಂದ್ರದ ಉದ್ಘಾಟನೆ ಮಾಡ್ತಾರೆ. ನಂತರ ಮಧ್ಯಾಹ್ನ 3.45ಕ್ಕೆ ಬೆಳಗಾವಿ ಜಿಲ್ಲೆಯ ಎಂ.ಕೆ.ಹುಬ್ಬಳ್ಳಿಗೆ ಆಗಮಿಸಲಿದ್ದು ಬೆಳಗಾವಿಯಲ್ಲಿ ಸರಣಿ ಸಭೆ ನಡೆಸಲಿದ್ದಾರೆ ಎಂದು ಮಾಹಿತಿ ನೀಡಿದರು.
ಜನವರಿ 28ರಂದು ಕಿತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ಬೃಹತ್ ಸಮಾವೇಶ ನಡೆಸಲಿದ್ದು ಕಿತ್ತೂರು ವಿಧಾನಸಭಾ ಕ್ಷೇತ್ರದ ಎಂ.ಕೆ.ಹುಬ್ಬಳ್ಳಿಯಲ್ಲಿ ಬೃಹತ್ ಸಮಾವೇಶ ಆಯೋಜನೆ ಮಾಡಲಾಗಿದೆ ಎಂದು ತಿಳಿಸಿದರು.