ಚಿತ್ರದುರ್ಗ: ರಾಜ್ಯದಲ್ಲಿ 15 ಸಾವಿರ ಪೊಲೀಸ್ ಹುದ್ದೆಗಳು ಖಾಲಿ ಇವೆ. ಅವುಗಳನ್ನು ಭರ್ತಿ ಮಾಡುವ ಬಗ್ಗೆ ಸರ್ಕಾರ ಚಿಂತನೆ ನಡೆಸಿದೆ. ಪಿಎಸ್ಐ ಹಗರಣದಿಂದ ಗೊಂದಲ ಉಂಟಾಗಿದ್ದು, ಮರು ಪರೀಕ್ಷೆಗೆ ಈಗಾಗಲೇ ಸಿದ್ದತೆ ನಡೆದಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.
ನಗರದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರದಿಂದ ಪೊಲೀಸ್ ಹುದ್ದೆಗಳನ್ನು ಭರ್ತಿ ಮಾಡಲು ಯೋಜಿಸಲಾಗಿದೆ. 1,000 ಪಿಎಸ್‌ಐ ಹುದ್ದೆಗಳನ್ನು ಹಂತ ಹಂತವಾಗಿ ನೇಮಕ ಮಾಡಿಕೊಳ್ಳಲು ಸರ್ಕಾರ ಸಿದ್ದವಿದೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ : ನಮ್ಮ ತಂದೆ ಸರಿಯಾದ ಬುದ್ದಿ ಕಲಿಸಿದ್ದಾರೆ; ನಿಮ್ಮಿಂದ ಕಲಿಯಬೇಕಿಲ್ಲ: ಕಿಡಿಕಾರಿದ ಹೆಚ್‌ಡಿಕೆ
3,000 ಸಾವಿರ ಪೊಲೀಸ್ ಪೇದೆ ಹುದ್ದೆಗಳ ನೇಮಕಾತಿಗೆ ತಯಾರಿ ನಡೆಸುತ್ತಿದ್ದೇವೆ. ಡಿಆರ್‌ಇ ಸೆಲ್ ಗಳಿಗೆ ನಾವು ದೂರು ಸ್ವೀಕರಿಸಲು ಅಧಿಕಾರ ನೀಡಿದ್ದೇವೆ ಎಂದು ಹೇಳಿದ್ದಾರೆ.
ಮುರುಘಾ ಶ್ರೀ ಪ್ರಕರಣದ ಕುರಿತು ಪ್ರತಿಕ್ರಿಯಿಸಿ, ಆ ಪ್ರಕರಣದಲ್ಲಿ ಕೋರ್ಟ್ ಆದೇಶ ಏನೂ ಬಂದಿದೆ, ಅದನ್ನು ಚಾಚು ತಪ್ಪದೇ ಪಾಲಿಸುತ್ತೇವೆ. ಕೋರ್ಟ್‌ನಲ್ಲಿ ಪ್ರಕರಣವಿರುವುದರಿಂದ ಅದರ ಆದೇಶದಂತೆ ನಡೆದುಕೊಳ್ಳುತ್ತೇವೆ ಎಂದು ಮಾಹಿತಿ ನೀಡಿದ್ದಾರೆ.
ಸಿಎಂ ಪಟಾಲಂ ನನ್ನನ್ನು ಕಳ್ಳನನ್ನಾಗಿ ಬಿಂಬಿಸುತ್ತಿದ್ದಾರೆ ಎಂಬ ಕುಮಾರಸ್ವಾಮಿ ಹೇಳಿಕೆ ವಿಚಾರವಾಗಿ ಮಾತನಾಡಿದ ಅವರು, ಸಿಎಂ ಆಗಿ ಎರಡು ಬಾರಿ ಅವರು ಕೆಲಸ ಮಾಡಿದ್ದಾರೆ. ಟೀಕೆ ಟಿಪ್ಪಣಿ ಮಾಡಲಿ ನಾವು ಬೇಡ ಎಂದು ಹೇಳುವುದಿಲ್ಲ. ನಮಗೆ ಸಲಹೆ ಬೇಕು ನೀಡಲಿ, ಅವರಿಗೆ ಸುಖಾ ಸುಮ್ಮನೆ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ನಿರಾಕರಿಸಿದ್ದಾರೆ.
ಗ್ಯಾರಂಟಿ ಯೋಜನೆ ಅರೆಬೆಂದ ಯೋಜನೆ ಎಂಬ ವಿಜಯೇಂದ್ರ ಹೇಳಿಕೆಗೆ ತಿರುಗೇಟು ನೀಡಿರುವ ಪರಮೇಶ್ವರ್, ಕೋಟ್ಯಂತರ ಜನರಿಗೆ ನಾವು ಗ್ಯಾರಂಟಿಗಳನ್ನು ನೀಡಿದ್ದೇವೆ. ಅನ್ನಭಾಗ್ಯ, ಗೃಹಲಕ್ಷ್ಮಿ ಯೋಜನೆಗಳನ್ನು ನೇರವಾಗಿ ತಲುಪಿಸಿದ್ದೇವೆ. ನಮಗೆ ರಾಜಕೀಯ ನಾಯಕರ ಸರ್ಟಿಫಿಕೇಟ್ ಬೇಕಾಗಿಲ್ಲ. ಜನರು ಸರ್ಟಿಫಿಕೇಟ್ ನೀಡಿದ್ದಾರೆ, ಮುಂದೆಯೂ ನೀಡುತ್ತಾರೆ ಎಂದು ಹೇಳಿದ್ದಾರೆ.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.