ಹಾಸನ : ಪ್ರಬಲ ವಿರೋಧ ಪಕ್ಷಗಳ ನಡುವೆಯೂ ವಿಧಾನಸಭೆ, ಎಂಪಿ, ಎಂಎಲ್ಸಿ ಚುನಾವಣೆಯಲ್ಲಿ ಹೆಚ್.ಡಿ.ರೇವಣ್ಣ, ಪ್ರಜ್ವಲ್ ರೇವಣ್ಣ, ಸೂರಜ್ ರೇವಣ್ಣ ಅವರು ಗೆಲುವು ಸಾಧಿಸಿದ್ದಾರೆ ಎಂದು ಜೆಡಿಎಸ್ ವರಿಷ್ಠ ದೇವೇಗೌಡ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯದಲ್ಲಿ ವಿರೋಧ ಪಕ್ಷಗಳನ್ನು ಹೇಗೆ ಎದುರಿಸಿ ಚುನಾವಣೆ ಗೆಲ್ಲಬೇಕು ಎಂಬುದು ನನಗೆ ಗೊತ್ತಿದೆ ಎಂದು ಹೇಳಿದ್ದಾರೆ.ಹಾಸನ ಜಿಲ್ಲೆಯಲ್ಲಿ ನಡೆಯುವ ಪಂಚರತ್ನ ಯಾತ್ರೆ ಹಾಗೂ ರಾಜ್ಯಾದ್ಯಂತ ಚುನಾವಣಾ ಪ್ರಚಾರದ ವೇಳೆ ಹೆಚ್.ಡಿ. ಕುಮಾರಸ್ವಾಮಿ ಅವರೊಂದಿಗೆ ಆಗಮಿಸಲಿದ್ದಾರೆ.
ಪಂಚರತ್ನ ರ್ಯಾಲಿ ಜೆಡಿಎಸ್ ನ ಯಶಸ್ವಿ ಕಾರ್ಯಕ್ರಮವಾಗಿದ್ದು ಪಕ್ಷಕ್ಕೆ ಸಹಕಾರಿಯಾಗಲಿದೆ ಎಂದರು. ತಮ್ಮ ಪುತ್ರ ಮಾಜಿ ಸಿಎಂ ಎಚ್ ಡಿ ಕುಮಾರ ಸ್ವಾಮಿ ಅವರ ರಾಜಕೀಯ ಹೇಳಿಕೆಗಳಲ್ಲಿ ಯಾವುದೇ ವ್ಯತ್ಯಾಸವಿಲ್ಲ. ಶಾಸಕರು ಮತ್ತು ಪಕ್ಷದ ನಾಯಕರ ನಡುವಿನ ಭಿನ್ನಾಭಿಪ್ರಾಯದ ಬಗ್ಗೆ ತೀರ್ಮಾನಕ್ಕೆ ಬರುವುದು ಉತ್ತಮ ಎಂದು ದೇವೇಗೌಡ ಸ್ಪಷ್ಟಪಡಿಸಿದ್ದಾರೆ.
ನನ್ನ ಹಾಗೂ ಕುಮಾರಸ್ವಾಮಿಯ ರಾಜಕೀಯ ಹೇಳಿಕೆಗಳಲ್ಲಿ ಯಾವುದೇ ವ್ಯತ್ಯಾಸವಿಲ್ಲ. ಎಚ್.ಡಿ.ಕುಮಾರಸ್ವಾಮಿ ಕೇವಲ ಪಕ್ಷ ಮತ್ತು ಕಾರ್ಯಕರ್ತರ ಹಿತದೃಷ್ಟಿಯಿಂದ ಮಾತನಾಡುತ್ತಾರೆ ಎಂದು ಹೇಳಿದ್ದಾರೆ.