ಬಾಗಲಕೋಟೆ: ನಾನು ಬಾಗಲಕೋಟೆ ಲೋಕಸಭಾ ಚುನಾವಣೆಯ ಪ್ರಬಲ ಆಕಾಂಕ್ಷಿಎಂದು ಮಾಜಿ ಕ್ರೀಡಾಸಚಿವ ಅಜಯಕುಮಾರ್ ಸರನಾಯಕ ಹೇಳಿದರು.
ನವನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ನಾನು ಕೂಡಾ ಕಾಂಗ್ರೆಸ್ ಪಕ್ಷದ ಪ್ರಬಲ ಟಿಕೆಟ್ ಆಕಾಂಕ್ಷಿಯಾಗಿದ್ದು, ಟಿಕೆಟ್ ಕುರಿತು ವರಿಷ್ಠರ ಜೊತೆ ಚರ್ಚಿಸುತ್ತೇನೆ, ನನ್ನ ಅಭಿಪ್ರಾಯ ತಿಳಿಸುತ್ತೇನೆ, ಪಕ್ಷದ ಏನೇ ತೀರ್ಮಾನ ತೆಗೆದುಕೊಂಡರೂ ಬದ್ಧನಾಗಿದ್ದೇನೆ ಎಂದರು.
ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಿದ ಬೆನ್ನಲ್ಲೇ ಕಾಂಗ್ರೆಸ್ ನಾಯಕರ ಕಣ್ಣು ಲೋಕಸಭೆ ಟಿಕೆಟ್ ಮೇಲೆ ಬಿದ್ದಿದೆ.ಕಾಂಗ್ರೆಸ್ ಟಿಕೆಟ್ ಗೆ ಭರ್ಜರಿ ಪೈಪೋಟಿ ನಡೆಯುತ್ತಿದ್ದು, ಮಾಜಿ ಜಿ.ಪಂ.ಅಧ್ಯಕ್ಷೆ ಹಾಗೂ ಕೆಪಿಸಿಸಿ ರಾಜ್ಯ ಮಹಿಳಾ ಘಟಕದ ಪ್ರಧಾನಕಾರ್ಯದರ್ಶಿ ವೀಣಾ ಕಾಶಪ್ಪನವರ್ ಕ್ಯೂ ನಲ್ಲಿದ್ದಾರೆ, ಕಳೆದ ಬಾರಿ ಬಾಗಲಕೋಟೆ ಲೋಕಸಭೆ ಕ್ಷೇತ್ರದಲ್ಲಿ ಕಾಂಗ್ರೆಸ್ ನಿಂದ ಸ್ಪರ್ಧಿಸಿದ್ದ ವೀಣಾ ಕಾಶಪ್ಪನವರ್ ಅಂದಾಜು ಐದು ಲಕ್ಷದ ವರೆಗೆ ಮತಗಳನ್ನ ಪಡೆದು ಬಿಜೆಪಿಗೆ ಪ್ರಬಲ ಟಕ್ಕರ್ ಕೊಟ್ಟಿದ್ದರು.
ಇದನ್ನೂ ಓದಿ : ಪ್ರಧಾನಿ ಮೋದಿಗೆ ಗ್ರೀಸ್‌ನ ಪ್ರತಿಷ್ಠಿತ ಪ್ರಶಸ್ತಿ!
ಈ ಬಾರಿಯೂ ಪ್ರಬಲ ಟಿಕೆಟ್ ಆಕಾಂಕ್ಷಿಯಾಗಿರುವ ವೀಣಾಕಾಶಪ್ಪನವರ್ ಭರ್ಜರಿ ತಯಾರಿಯಲ್ಲಿ ತೊಡಗಿದ್ದಾರೆ. ಈ ಬಾರಿ ಕಾಂಗ್ರೆಸ್ ಟಿಕೆಟ್‌ಗಾಗಿ ಭಾರಿ ಪೈಪೋಟಿ ನಡೆಯುತ್ತಿದ್ದು, ಪಕ್ಷ ಯಾರಿಗೆ ಮಣೆ ಹಾಕುತ್ತೆ ಅನ್ನೋದು ಮಾತ್ರ ಕುತೂಹಲವಾಗಿದೆ.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.