ಹೈಕಮಾಂಡ್‌ ಭೇಟಿ ಆಗಿದ್ದೇನೆ, ದೆಹಲಿಗೆ ಗಾಳಿ ಕುಡಿಯಲು ಬಂದಿಲ್ಲ : ಡಿಕೆಶಿ

ನವದೆಹಲಿ : ನಾನು ಹೈಕಮಾಂಡ್ ನಾಯಕರನ್ನು ಭೇಟಿಯಾಗಿದ್ದೇನೆ. ಆದರೆ ಯಾರು ಎಂದು ಹೇಳುವುದಿಲ್ಲ ಎಂದಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌, ದೆಹಲಿಗೆ ನಾನು ಗಾಳಿ ಕುಡಿಯಲು ಬಂದಿಲ್ಲ. ಬಿಸಿಲು ಇದೆ, ನೀರು ಕುಡಿಯಬೇಕಿದೆ ಎಂದು ಮಾರ್ಮಿಕವಾಗಿ ಮಾತನಾಡಿದ್ದಾರೆ.

ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮಿಳುನಾಡು ಮತ್ತು ಅಸ್ಸಾಂ ಚುನಾವಣೆ ಕುರಿತು ನಮ್ಮ ನಾಯಕರಿಗೆ ಮಾಹಿತಿ ನೀಡಬೇಕಿದೆ. ಹಾಗೆಯೇ ನಾಳೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರ ಭೇಟಿಗೆ ಅವಕಾಶ ಕೇಳಿದ್ದೇನೆ. ಬೆಂಗಳೂರು ಸಮಸ್ಯೆಗಳ ಬಗ್ಗೆ ಕೇಂದ್ರ ಸಚಿವರ ಜೊತೆ ಚರ್ಚೆ ಮಾಡಬೇಕಿದೆ ಎಂದು ಹೇಳಿದರು.

ಇದನ್ನೂ ಓದಿ : #BREAKING ಸಚಿವ ಡಿ.ಸುಧಾಕರ್ ಆರೋಗ್ಯ ಸ್ಥಿತಿ ಗಂಭೀರ, ತೀವ್ರ ನಿಘಾ ಘಟಕದಲ್ಲಿ ಚಿಕಿತ್ಸೆ..!

ರಾಜ್ಯದಲ್ಲಿ ಬದಲಾವಣೆಗಳ ಬಗ್ಗೆ ನಾನು ಮಾಧ್ಯಮಗಳ‌ ಮುಂದೆ ಮಾತಾಡುವುದಿಲ್ಲ ಎಂದ ಅವರು, ಅಲ್ಪಸಂಖ್ಯಾತ ನಾಯಕರ ಅಸಮಾಧಾನ ವಿಚಾರವಾಗಿ ಪ್ರತಿಕ್ರಿಯಿಸಿ, ಅವರ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಇದರಲ್ಲಿ ತಪ್ಪಿಲ್ಲ. ಕೆಲವು ಬಾರಿ ನಮ್ಮ ಕಡೆಯಿಂದ ತಪ್ಪಾಗಿಬಹುದು. ಕೆಲವು ಬಾರಿ ಅವರ ಕಡೆಯಿಂದ ತಪ್ಪಾಗಿರಬಹುದು ಎಂದು ತಿಳಿಸಿದರು.

ಇನ್ನು ಅಮಾನತು ವಾಪಸ್ ಪಡೆಯುವ ವಿಚಾರವಾಗಿ ಪ್ರಶ್ನಿಸಿದ್ದಕ್ಕೆ, ಇದು ಅಮಾನತು ಅಲ್ಲ. ಬದಲಿಗೆ ಅವರೇ ರಾಜೀನಾಮೆ ಕೊಟ್ಟಿದ್ದಾರೆ. ಒಮ್ಮೆ ರಾಜೀನಾಮೆ ಪತ್ರ ವಿಶ್ಲೇಷಣೆ ಮಾಡಿ ಎಂದು ತಿಳಿಸಿದರು. ಒಟ್ಟರೆ ಡಿಸಿಎಂ ಡಿ.ಕೆ.ಶಿವಕುಮಾರ್ ದೆಹಲಿ‌ಪ್ರವಾಸ ರಾಜ್ಯ ರಾಜಕಾರಣದಲ್ಲಿ ಕುತೂಹಲ ಮೂಡಿಸಿದ್ದು, ಮುಂದಿನ‌ ಬೆಳವಣಿಗೆಯನ್ನ ಕಾದು ನೋಡಬೇಕಿದೆ.

Leave a Reply

Your email address will not be published. Required fields are marked *