ಕೊಪ್ಪಳ: ರಕ್ತದಲ್ಲಿ ಬರೆದುಕೊಡುತ್ತೇನೆ, ನಾನು ಬಿಜೆಪಿಯಲ್ಲೇ ಇರುತ್ತೇನೆ ಎಂದು ಸಂಸದ ಸಂಗಣ್ಣ ಕರಡಿ ಹೇಳಿದ್ದಾರೆ. ಕಾಂಗ್ರೆಸ್ ಸೇರ್ಪಡೆ ವದಂತಿ ಹಿನ್ನೆಲೆ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಲೋಕಸಭೆಯಲ್ಲಿ ಮತ್ತೆ ಸ್ಪರ್ಧಿಸುತ್ತೇನೆ. ಪಕ್ಷ ಟಿಕೆಟ್ ನೀಡುತ್ತದೆ ಎಂಬ ವಿಶ್ವಾಸವಿದೆ ಎಂದಿದ್ದಾರೆ.
ಟಿಕೆಟ್ ನೀಡದಿದ್ದರೂ ಪಕ್ಷ ಸೂಚಿಸಿದವರ ಪರವಾಗಿ ಕೆಲಸ ಮಾಡುತ್ತೇನೆ. ಕುಷ್ಟಗಿ ಶಾಸಕ ದೊಡ್ಡನಗೌಡ ಹಾಗೂ ಇತರರು ಬಿಜೆಪಿ ಬಿಡುವುದಿಲ್ಲ. ಬಿಜೆಪಿ ಸಂಘಟನೆಯಲ್ಲಿ ಒಂದಿಷ್ಟು ಹಿನ್ನೆಡೆಯಾಗಿದೆ. ಆದರೆ ಹೈಕಮಾಂಡ್ ಇದನ್ನೆಲ್ಲ ಹರಿಹಾರ ಮಾಡಲಿದ್ದಾರೆ. ಜೊತೆಗೆ ಶೀಘ್ರವೇ ವಿಪಕ್ಷ ನಾಯಕನ ಹುದ್ದೆಗೆ ಸೂಕ್ತ ನಾಯಕರ ಆಯ್ಕೆ ಮಾಡುತ್ತಾರೆ ಎಂದಿದ್ದಾರೆ.
ಇದನ್ನೂ ಓದಿ: ದಾವಣಗೆರೆ ದಂಪತಿ ಅಮೆರಿಕಾದಲ್ಲಿ ನಿಧನ; ಸಿಎಂ ನೆರವು ಕೋರಿದ ಕುಟುಂಬಸ್ಥರು
ಡಿಸಿಎಂ ಭೇಟಿಯಾದ ಬಿಜೆಪಿ ನಾಯಕ
ಬಿಜೆಪಿ ನಾಯಕ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಅವರು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿದ್ದಾರೆ. ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ಇಂದು ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಡಿಕೆ ಶಿವಕುಮಾರ್ ಅವರನ್ನು ಭೇಟಿಯಾಗಿ ಗೌಪ್ಯ ಚರ್ಚೆ ನಡೆಸಿದ್ದು,ಭಾರೀ ಕುತೂಹಲಕ್ಕೆ ಮೂಡಿಸಿದೆ. ರಾಜ್ಯದಲ್ಲಿ ಕಾಂಗ್ರೆಸ್ ಆಪರೇಷನ್ ಕಮಲ ಆರಂಭಿಸಿರುವ ಮಾತುಗಳು ಕೇಳಿಬರುತ್ತಿರುವ ನಡುವೆ ಕಟ್ಟಾ ಸುಬ್ರಮಣ್ಯ ನಾಯ್ಡು ಭೇಟಿ ಭಾರೀ ಕುತೂಹಲ ಮೂಡಿಸಿದೆ.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.